ತುಮಕೂರು: ಇಲ್ಲಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮಿ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ಸಿಗಬಹುದು ಎಂಬ ಸುದ್ದಿಯನ್ನು ಹೇಳಿದ್ದೆವು. ಆದರೆ ಇದೀಗ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ.ಶ್ರೀಗಳಿಗೆ ಕಫ, ಜ್ವರ ಕಾಣಿಸಿಕೊಂಡು ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ರಾತ್ರಿ ಶಿವಪೂಜೆ ಮುಗಿದ ಬಳಿಕ ಸ್ವಾಮೀಜಿಯವರ ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡುಬಂದಿದೆ. ತಕ್ಷಣ ನಸುಕಿನ ಜಾವ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಬರಲಾಗಿದ್ದು, ಸದ್ಯ ಶ್ರೀಗಳಿಗೆ ನುರಿತ ವೈದ್ಯರ ತಂಡವೊಂದು ಚಿಕಿತ್ಸೆ ನೀಡುತ್ತಿದೆ.ಭಾರತ ರತ್ನ ಪ್ರಶಸ್ತಿಗೆ ಮನವಿ: 
ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಭಾರತ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದರು.ಮನವಿಯಲ್ಲೇನಿದೆ?: 
ಶತಮಾನಗಳಷ್ಟು ಹಳೆಯದಾದ ತುಮಕೂರಿನ ಸಿದ್ದಗಂಗಾ ಮಠ ಕಳೆದ 600 ವರ್ಷಗಳಿಂದ ಶಿಕ್ಷಣ, ಅನ್ನ ದಾಸೋಹ ಮಾಡುತ್ತಾ ಬಂದಿದೆ. ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾಗಿರುವ ಶತಾಯುಷಿ, ಶಿಕ್ಷಣ, ಅನ್ನದಾಸೋಹದ ಪ್ರಮುಖ ರೂವಾರಿಯಾಗಿರೋ ಸಿದ್ದಗಂಗಾ ಶ್ರೀಗಳ ಕೊಡುಗೆ ಅನನ್ಯವಾಗಿದೆ. ಸ್ವಾಮೀಜಿಯವರು ಈಗ 110 ವರ್ಷಗಳನ್ನು ಪೂರೈಸಿದ್ದಾರೆ. ಎಲ್ಲ ಸಮುದಾಯದ ಕಡುಬಡವ ಮಕ್ಕಳಿಗೆ ಅನ್ನ ದಾಸೋಹ ಮಾಡುವ ಮೂಲಕ ಶಿಕ್ಷಣ ನೀಡಿ ಉತ್ತಮ ನಾಗರಿಕರನ್ನಾಗಿ ಮಾಡಿದ ಕೀರ್ತಿ ಸ್ವಾಮೀಜಿಗೆ ಸಲ್ಲುತ್ತದೆ. ಇದು ಅವರ ನಿಸ್ವಾರ್ಥ ಸೇವೆಗೆ ಹಿಡಿದ ಕೈಗನ್ನಡಿಯಾಗಿದೆ. ಇಂದಿಗೂ ಸಿದ್ದಗಂಗಾ ಮಠ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಸತಿ, ಶಿಕ್ಷಣ ಜೊತೆಗೆ ಉಚಿತ ಪ್ರಸಾದವನ್ನು ನೀಡುತ್ತಾ ಬಂದಿದೆ. ದೇಶದಲ್ಲೇ ಅತ್ಯುನ್ನತ ಶಿಕ್ಷಣ ಸಂಸ್ಥೆ ಎಂದು ಖ್ಯಾತಿಯಾಗಿದೆ. ಇದರ ರೂವಾರಿಯಾಗಿರುವ ಡಾ. ಶಿವಕುಮಾರ ಸ್ವಾಮೀಜಿ ಅವರ ಅನನ್ಯ ಸೇವೆಯನ್ನು ಪರಿಗಣಿಸಿ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನಕ್ಕೆ ಶಿಫಾರಸು ಮಾಡಬೇಕೆಂದು ರಾಜ್ಯದ ಪರವಾಗಿ ನಾನು ವಿನಂತಿಸಿಕೊಳ್ಳುತ್ತಿದ್ದೆನೆ ಎಂದು ಪತ್ರದಲ್ಲಿ ಸಿಎಂ ಉಲ್ಲೇಖಿಸಿದ್ದರು.Sign in to your account
Username or Email Address


Password

 Remember Me


