ಬೆಂಗಳೂರು: ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಇಂದು ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದು, ಇಂದು ಎಲ್ಲಾ ಸರ್ಕಾರಿ ವೈದ್ಯರ ರಜೆಯನ್ನು ರದ್ದುಗೊಳಿಸಲಾಗಿದೆ.ಎಲ್ಲರೂ ತಪ್ಪದೆ ಕೆಲಸಕ್ಕೆ ಹಾಜರಾಗುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆಯನ್ನು ನೀಡಿದೆ. ಬಂದ್ ವೇಳೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಅಹಿತಕರ ಘಟನೆಗಳು ನಡೆದಾಗ ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇರುತ್ತದೆ. ಹಾಗಾಗಿ ಯಾರೂ ರಜೆ ಹಾಕುವುಂತಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಸುತ್ತೋಲೆ ಹೊರಡಿಸಿದೆ. ಇದನ್ನು ಓದಿ: ಮಹದಾಯಿಗಾಗಿ ಕರ್ನಾಟಕ ಬಂದ್- ರಸ್ತೆಗಿಳಿಯದ BMTC, KSRTC ಬಸ್Sign in to your account
Username or Email Address


Password

 Remember Me


