ಮಂಡ್ಯ: ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸ್ವರ್ಣಸಂದ್ರದಲ್ಲಿ ನಡೆದಿದೆ.ಹಂಸ ಅರಸ್ (30) ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಗೃಹಿಣಿ. ಹಂಸ 10 ವರ್ಷಗಳ ಹಿಂದೆ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಶಿವಕುಮಾರ್ ಅವರ ಜೊತೆ ಮದುವೆಯಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ.ಶಿವಕುಮಾರ್ ಮಿಲಿಟರಿಯಿಂದ ಮನೆಗೆ ಬಂದಿದ್ದರು. ಆದರೆ ಬುಧವಾರ ಸಂಜೆ ಮನೆಯವರು ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ತಮ್ಮ ಮನೆಯಲ್ಲಿಯೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯವರು ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಈ ಘಟನೆ ಸಂಬಂಧ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


