ಚಿಕ್ಕಬಳ್ಳಾಪುರ: ಹೆಂಡತಿಯನ್ನ ಕಾಡಿಗೆ ಕರೆದುಕೊಂಡು ಹೋದ ಗಂಡನೋರ್ವ ಕಾಡಿನಲ್ಲಿ ಆಕೆಯ ಕತ್ತು ಕೊಯ್ದು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಬುಡಗವಾರಪಲ್ಲಿ ಗ್ರಾಮದ ಬಳಿ ಆಲಗುರ್ಕಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.ಗ್ರಾಮದ ಶ್ರೀನಿವಾಸ್ ಎಂಬಾತ ಚಾಕುವಿನಿಂದ ತನ್ನ ಪತ್ನಿ ಸುಮಾಳ ಕತ್ತು ಕೊಯ್ದಿದ್ದಾನೆ. ಸುಮಾ ಅವರ ಕೈ-ಕಾಲಿಗೂ ಸಹ ಚಾಕುವಿನಿಂದ ಇರಿದು ಶ್ರೀನಿವಾಸ್ ಪರಾರಿಯಾಗಿದ್ದಾನೆ. ಘಟನೆ ನಂತರ ಸುಮಾ ತನ್ನ ಪೋಷಕರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದು, ಸ್ಥಳಕ್ಕೆ ಬಂದ ಸುಮಾ ಪೋಷಕರು ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದ ಸುಮಾಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾರೆ.ಸದ್ಯ ಸುಮಾ ಪ್ರಾಣಾಪಾಯದಿಂದ ಪಾರಾಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸುಮಾ ಮಾತನಾಡುವ ಪರಿಸ್ಥಿತಿಯಲ್ಲಿಲ್ಲವಾದ್ದರಿಂದ ಆಕೆಯ ಗಂಡ ಈ ರೀತಿ ಮಾಡಲು ಕಾರಣವೇನೆಂಬುದು ತಿಳಿದುಬಂದಿಲ್ಲ.ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಈ ಪ್ರಕರಣ ನಡೆದಿದೆ. Sign in to your account
Username or Email Address


Password

 Remember Me


