ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿ ನಡೆದಿದೆ.ರಾಜಾಜಿನಗರ ನಿವಾಸಿಯಾದ ಸಾಹಿತ್ಯ(24) ಸಾವನ್ನಪಿದ್ದ ಯುವತಿ. ರಾಜಾಜಿನಗರದ ನಿವಾಸಿಯಾದ ಅವರು ಪ್ರಿಂಟಿಂಗ್ ಪ್ರೆಸ್ ಮಾಲೀಕ ನರಸರಾಜ್ ಮಗಳಾದ ಸಾಹಿತ್ಯ ಹೆಸರುಘಟ್ಟ ಬಳಿಯ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್ ಪದವಿ ಓದುತ್ತಿದ್ದರು.ಕನ್ನಿಂಗ್‍ಹ್ಯಾಮ್ ರಸ್ತೆಯ ಖಾಸಗಿ ಕಂಪನಿಯಲ್ಲಿ ತರಬೇತಿಗೆಂದು ಹೋಗುತ್ತಿದ್ದ ವೇಳೆ ಬಿಬಿಎಂಪಿ ಲಾರಿ ಚಾಲಕ ಅಡ್ಡಾದಿಡ್ಡಿ ವಾಹನ ಚಲಿಸಿದ್ದೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸೋಮವಾರದಂದು ಈ ಘಟನೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಈ ಬಗ್ಗೆ ಹೈಗೌಂಡ್ಸ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


