ಮಡಿಕೇರಿ: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರದ ಕರಡಿಗೋಡುವಿನಲ್ಲಿ ನಡೆದಿದೆ.ಕರಡಿಗೋಡು ಗ್ರಾಮದ ನಿವಾಸಿ ಬೆಳೆಗಾರ ಕುಕ್ಕುನೂರು ಮೋಹನ್ ದಾಸ್ ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿ. ಕರಡಿಗೋಡುವಿನಲ್ಲಿರುವ ತನ್ನ ಕಾಫಿ ತೋಟದಲ್ಲಿ ಕಾರ್ಮಿಕರನ್ನು ಬಿಟ್ಟು ಮಧ್ಯಾಹ್ನ ಮನೆಗೆ ಊಟಕ್ಕೆ ತೆರಳುತಿರುವ ಸಂದರ್ಭದಲ್ಲಿ ಏಕಾಎಕಿ ಕಾಡಾನೆ ಹಿಂಡು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಮೋಹನ್ ದಾಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ವಿರಾಜಪೇಟೆ ಶಾಸಕಾರಾದ ಕೆ.ಜಿ. ಬೋಪಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ, ಜೆಡಿಎಸ್ ಸಂಕೇತ್ ಪೂವಯ್ಯ, ಡಿ.ಎಫ್.ಓ ಮರಿಯಾ ಕ್ರಿಸ್ಟರಾಜ್, ಎ.ಸಿ.ಎಫ್ ರೋಶಿನಿ ಸೇರಿದಂತೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.ಕಾಡಾನೆ ದಾಳಿಯಿಂದ ಮೋಹನ್ ದಾಸ್ ಸಾವನ್ನಪ್ಪಿದನ್ನು ಖಂಡಿಸಿ ಹಾಗೂ ಸರ್ಕಾರ ಮತ್ತು ಅರಣ್ಯಧಿಕಾರಿಳು ಆನೆಗಳ ಹಾವಳಿಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕೆಂದು ಒತ್ತಾಯಿಸಿ ವರ್ತಕರು ಸ್ವಯಂಪ್ರೇರಿತರಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ ಸಿದ್ದಾಪುರ ಬಂದ್ ಮಾಡಿದರು.Sign in to your account
Username or Email Address


Password

 Remember Me


