ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಎತ್ತಂಗಡಿ ಮಾಡಲಾಗಿದೆ.ರೋಹಿಣಿ ಸಿಂಧೂರಿ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ(ಕೆಎಸ್‍ಐಐಡಿಸಿ) ಆಡಳಿತ ನಿರ್ದೇಶಕಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ರೋಹಿಣಿ ಅವರ ಜಾಗಕ್ಕೆ ಹಾವೇರಿ ಜಿಲ್ಲಾಧಿಕಾರಿಯಾಗಿದ್ದ ಎಂ.ವಿ. ವೆಂಕಟೇಶ್ ಅವರನ್ನು ನೇಮಿಸಲಾಗಿದೆ.ಕೈ ನಾಯಕರಿಂದ ದೂರು:
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಹಾಸನ ಭೇಟಿ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್‍ನ ಕೆಲ ನಾಯಕರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ಆಗ್ರಹಿಸಿದ್ದಾರೆ ಎನ್ನುವ ಸುದ್ದಿ ಸದ್ದು ಮಾಡಿತ್ತು. ಜನವರಿ 4ರಂದು ಹಾಸನದ ಮೂರು ಕಡೆ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ ಸಿಎಂ ಅಂದು ರಾತ್ರಿ ನಗರದ ಪ್ರವಾಸಿ ಮಂದಿರದಲ್ಲಿ ತಂಗಿದ್ದರು. ಈ ಸಂದರ್ಭದಲ್ಲಿ ಸಿಎಂ ರನ್ನು ಭೇಟಿ ಮಾಡಿದ ಹಲವು ನಾಯಕರು, ಜಿಲ್ಲಾಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದರು. ಜೊತೆಗೆ ಉಸ್ತುವಾರಿ ಸಚಿವರಾದ ಎ. ಮಂಜು, ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಸೇರಿದಂತೆ ಹಲವು ನಾಯಕರು ರೋಹಿಣಿ ಅವರ ವರ್ಗಾವಣೆಗೆ ಆಗ್ರಹಿಸಿದ್ದಾರೆ ಎನ್ನುವ ಮಾತು ಕೇಳಿಬಂದಿತ್ತು.ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ನಾಯಕರು, ನಾವು ವರ್ಗಾವಣೆಗೆ ಆಗ್ರಹಿಸಿಲ್ಲ. ಬದಲಾಗಿ ಅವರು ಸಾರ್ವಜನಿಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅದನ್ನು ಸರಿಮಾಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿರುವುದು ನಿಜ ಎಂದು ಹೇಳಿದ್ದರು. ಡಿಸಿ ಪರ ಬ್ಯಾಟಿಂಗ್ ಮಾಡಿದ್ದ ಜಿಲ್ಲೆಯ ಜೆಡಿಎಸ್ ನಾಯಕರು, ಮಸ್ತಕಾಭಿಷೇಕ ಕಾಮಗಾರಿಗಳಲ್ಲಿ ಹಣ ಗುಳುಂ ಮಾಡಲು ಅವಕಾಶ ನೀಡುತ್ತಿಲ್ಲ. ಅದಕ್ಕಾಗಿ ರೋಹಿಣಿ ಅವರ ವರ್ಗಾವಣೆಗೆ ಆಗ್ರಹಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರ್ಯಕ್ಕೆ ಸಿಎಂ ಅಭಿನಂದನೆಯಾರು ರೋಹಿಣಿ ಸಿಂಧೂರಿ?:
ಈ ಹಿಂದೆ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರು. ರಾಜ್ಯದಲ್ಲಿ ಮೊದಲ ಬಾರಿಗೆ ಭೂ ದಾಖಲೆಗಳ ಕುರಿತಂತೆ ವಿನ್ಯಾಸಗೊಂಡಿರುವ ಎಂ-ಆಸ್ತಿ ಅಪ್ಲಿಕೇಷನ್ ತಂದಿದ್ದರು. ಬಯಲು ಶೌಚಾಲಯ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಪಣ ತೊಟ್ಟಿದ್ದ ರೋಹಿಣಿ ಸಿಂಧೂರಿ ಅವರು ಹಳ್ಳಿ ಹಳ್ಳಿಗೆ ಹೋಗಿ, ಬಯಲು ಶೌಚಕ್ಕೆ ಹೋಗುವವರಿಗೆ ಶೌಚಾಲಯ ಬಳಸುವಂತೆ ತಿಳುವಳಿಕೆ ಹೇಳುವ ಮೂಲಕ ವಿಶೇಷ ಅಭಿಯಾನ ಮಾಡುತ್ತಿದ್ದರು.ನಿರ್ಮಲ್ ಭಾರತ್ ಯೋಜನೆಯಡಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಶೌಚಾಲಯ ನಿರ್ಮಾಣ ಗುರಿ ಸಾಧಿಸಿದ್ದ ಇವರ ಅಧಿಕಾರ ಅವಧಿಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಮಂಡ್ಯ ಜಿಲ್ಲೆ ಭಾರತದಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿತ್ತು. ಸಿಇಓ ಅವರ ಕಾರ್ಯ ವೈಖರಿಯನ್ನು ನೋಡಿ ಮಂಡ್ಯದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದರು.2015ರ ಸೆಪ್ಟೆಂಬರ್ ನಲ್ಲಿ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಿಸಿ ವರ್ಗಮಾಡಿತ್ತು. ಈಗ ಅಲ್ಲಿಂದ ಮೊದಲ ಬಾರಿಗೆ ಜಿಲ್ಲಾಧಿಕಾರಿಯಾಗಿ ಹಾಸನಕ್ಕೆ ಬಂದಿದ್ದರು. ಕಳೆದ 2017ರ ಜುಲೈ 14ರಿಂದ ಹಾಸನದ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ಅಲ್ಪಾವಧಿಯಲ್ಲಿ ದಕ್ಷ ಆಡಳಿತಾಧಿಕಾರಿ ಎಂದು ಹೆಸರು ಪಡೆದುಕೊಂಡಿದ್ದರು. ತಮ್ಮ ಕೆಲಸದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಪ್ರಶಸ್ತಿಯನ್ನು ಪಡೆದಿದ್ದರು. ಶ್ರವಣಬೆಳಗೋಳ ಮಹಾಮಸ್ತಕಾಭಿಷೇಕ ಸೇರಿದಂತೆ ಹಾಸನದ ಹಲವು ಯೋಜನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಕ್ರಿಯಾಶೀಲರಾಗಿದ್ದರು.https://www.youtube.com/watch?v=RIlr3y8t7owhttps://www.youtube.com/watch?v=c6PoH0rh1XEhttps://www.youtube.com/watch?v=I0pUTEiRfSoSign in to your account
Username or Email Address


Password

 Remember Me


