ಬೆಂಗಳೂರು: ಬಳ್ಳಾರಿಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಬಿಡಲ್ಲ. ಅಲ್ಲಿಯ ಪ್ರತಿಯೊಬ್ಬ ನಾಗರಿಕನು ಒಬ್ಬೊಬ್ಬ ಜನಾರ್ದನ ರೆಡ್ಡಿಯಾಗಿ ಶ್ರೀರಾಮುಲು ಕೈ ಬಲ ಪಡಿಸಿ ಬಳ್ಳಾರಿಯ 8 ಕ್ಷೇತ್ರದಲ್ಲಿ ಜಯಭೇರಿ ಬಾರಿಸುತ್ತೇವೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನಲ್ಲಿ ವರ್ತೂರು ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಆಯೋಜಿಸಿದ್ದ ಸಂಕ್ರಾಂತಿ ಉತ್ಸವದಲ್ಲಿ ಆಕ್ರೋಶ ಭರಿತರಾಗಿ ಜನಾರ್ದನ ರೆಡ್ಡಿ ರಾಜ್ಯ ಸರ್ಕಾರವನ್ನು ತರಾಟೆ ತೆಗೆದುಕೊಂಡರು. ಸಿಎಂ ಸಿದ್ದರಾಮಯ್ಯ ಬಳ್ಳಾರಿ ಶಾಸಕರಾದ ಆನಂದ್ ಸಿಂಗ್ ಹಾಗೂ ನಾಗೇಂದ್ರರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯಲು ಹುನ್ನಾರ ನಡೆಸುತ್ತಿದ್ದು, ಮುಖ್ಯಮಂತ್ರಿಯವರ ಕನಸು ಕನಸಾಗಿ ಉಳಿಯುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.ಮಾತು ಮಾತಿಗು ಸಿಎಂ ಸಿದ್ದರಾಮಯ್ಯ ಅಮಿತ್ ಶಾ ಜೈಲು, ಯಡಿಯೂರಪ್ಪ ಜೈಲು, ಜನಾರ್ದನ ರೆಡ್ಡಿ ಜೈಲು ಎಂದು ವ್ಯಂಗ್ಯವಾಡುತ್ತಾರೆ. ಮುಂದೆ ಇದಕ್ಕೆ ಬಿಜೆಪಿ ಕಾರ್ಯಕರ್ತರು ತಕ್ಕಪಾಠ ಕಲಿಸುತ್ತಾರೆ ಎಂದಿದ್ದಾರೆ.Sign in to your account
Username or Email Address


Password

 Remember Me


