ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ದರ್ಶನ ಮಾಡಿದ ಬಳಿಕ ಮಾತನಾಡಿದ ಬಿಎಸ್‍ವೈ, ಮಾದಪ್ಪನ ದರ್ಶನ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಒಳ್ಳೆಯ ಕಾಲ ಬರುತ್ತದೆ. ರಾಜ್ಯದಲ್ಲಿ ಮಾದಪ್ಪನ ದಯೆಯಿಂದ ಬಿಜೆಪಿಗೆ ಬಹುಮತ ಬಂದು ಅಧಿಕಾರಕ್ಕೆ ಬರುತ್ತದೆ ಎಂದು ಅಭಿಲಾಷೆ ವ್ಯಕ್ತಪಡಿಸಿದ್ರು.ಮಾದಪ್ಪನ ದರ್ಶನ ಮಾಡುವ ವೇಳೆ ಸಂಸದೆ ಶೊಭಾಕರಂದ್ಲಾಜೆ 10 ನಿಮಿಷಗಳ ಕಾಲ ಮಾದಪ್ಪನ ಗರ್ಭ ಗುಡಿ ಮುಂದೆ ಕುಳಿತು ಪ್ರಾರ್ಥನೆ ಮಾಡಿದ್ದು ವಿಶೇಷವಾಗಿತ್ತು. ಯಡಿಯೂರಪ್ಪಗೆ ಸಂಸದೆ ಶೋಭಾ ಕರಂದ್ಲಾಜೆ, ರಾಮದಾಸ್, ಶಾಸಕ ಸಿ.ಪಿ ಯೋಗೇಶ್ವರ್ ಸಾಥ್ ನೀಡಿದರು.Sign in to your account
Username or Email Address


Password

 Remember Me


