ಮಂಗಳೂರು: ಸಿಎಂ ಬಗ್ಗೆ ಶಾಸಕ ಹರೀಶ್ ಪೂಂಜಾ (Harish Poonja)  ‘ಕಲೆಕ್ಷನ್ ಮಾಸ್ಟರ್’ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಮಂಗಳೂರು (Mangaluru) ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 83 ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ ಆಗಿದ್ದವನು. ಯಾರೂ ನನ್ನನ್ನು ಈ ರೀತಿ ಕರೆದಿರಲಿಲ್ಲ. ಇವರು ಪಾಪ ಇನ್ನೂ ರಾಜಕೀಯದಲ್ಲಿ (Politics) ಬಚ್ಚಾ. ಇದನ್ನು ಹಿಂದಿನ ಬಿಜೆಪಿ (BJP) ಸರ್ಕಾರ ಮತ್ತು ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದು ಕಿಡಿಕಾರಿದರು. ಇದನ್ನೂ ಓದಿ: Rozgar Mela: 51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ50 ಕೋಟಿ ಆಫರ್ ಬಗ್ಗೆ ನನಗೆ ಗೊತ್ತಿಲ್ಲ, ರವಿ ಹತ್ತಿರ ಕೇಳಿ. ಯಾರು ಹೇಳಿದ್ದಾರೋ ಅವರ ಹತ್ತಿರ ಕೇಳಿ. ನನಗೆ ಯಾವುದೇ ಮಾಹಿತಿ ಬಂದಿಲ್ಲ. ಬಿಜೆಪಿಯವರು ನಮ್ಮ ಸರ್ಕಾರ ಅಸ್ಥಿರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವ ಮಾಹಿತಿ ಇದೆ. 50 ಕೋಟಿ ಕೊಟ್ಟು ಅಧಿಕಾರದ ಆಫರ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲ ಎಂದರು. ಇದನ್ನೂ ಓದಿ: 50 ಅಲ್ಲ 100 ಕೋಟಿ ಕೊಟ್ರೂ ಕಾಂಗ್ರೆಸ್ ಶಾಸಕರು ಬಿಜೆಪಿ ಗಾಳಕ್ಕೆ ಬೀಳಲ್ಲ: ಗಣಿಗ ರವಿಪರಮೇಶ್ವರ್ (G Parameshwar) ಮನೆಯಲ್ಲಿ ಡಿನ್ನರ್ ಪಾರ್ಟಿ ಕುರಿತಾಗಿ ಮಾತನಾಡಿದ ಅವರು, ಪರಮೇಶ್ವರ್ ಊಟಕ್ಕೆ ಕರೆದಿದ್ದರು, ಹೋಗಿದ್ದೇವೆ. ಅದಕ್ಕೆ ಮಸಾಲೆ ಯಾಕೆ ಹಾಕ್ತೀರಾ? ಅವರು ನನಗೆ, ಮಹಾದೇವಪ್ಪ, ಸತೀಶ್ ಜಾರಕಿಹೊಳಿಗೆ ಊಟಕ್ಕೆ ಕರೆದಿದ್ದರು. ಅಲ್ಲಿ ಯಾವುದೇ ರಾಜಕೀಯ ಇಲ್ಲ. ಅದೆಲ್ಲಾ ಸುಳ್ಳು. ಬಣ್ಣ ಕಟ್ಟಲಾಗ್ತಿದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಕರ್ನಾಟಕ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ: ರೇಣುಕಾಚಾರ್ಯಮೊದಲ ಹಂತದಲ್ಲಿ ಕೆಲ ಶಾಸಕರಿಗೆ ನಿಗಮ ಮಂಡಳಿ ಕೊಡುತ್ತೇವೆ. ಎರಡನೇ ಹಂತದಲ್ಲಿ ಕಾರ್ಯಕರ್ತರು, ನಾಯಕರಿಗೆ ಶೀಘ್ರವಾಗಿ ಹಂಚಿಕೆ ಮಾಡಲಾಗುತ್ತದೆ. ನಾವು ಬರ ಪರಿಹಾರ 7,900 ಕೋಟಿ ಕೇಳಿದ್ದೇವೆ. ಆದರೆ ಕೇಂದ್ರ ಸರ್ಕಾರ ಒಂದು ರೂ. ಪರಿಹಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಹೊಂದಿದೆ ಎಂದರು. ಇನ್ನು ಕಾರ್ಕಳದ ಪರಶುರಾಮ ಮೂರ್ತಿ ಅಸಲಿನಾ? ನಕಲಿನಾ ಎಂಬುದರ ಕುರಿತು ತನಿಖೆ ಆಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಟಿಕೆಟ್ ಕೊಡಿಸೋದಾಗಿ ಚೈತ್ರಾ ಮಾದರಿಯಲ್ಲೇ ಕೋಟಿ ಕೋಟಿ ವಂಚನೆ- ಆರೋಪಿ ಅರೆಸ್ಟ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


