ಬೆಂಗಳೂರು: ಚಳಿ ಕಾಯಿಸಲು ಹೋದ ಯುವಕನೋರ್ವ ಬೆಂಕಿಗಾಹುತಿಯಾದ ಘಟನೆಯೊಂದು ನಡೆದಿದೆ.ಆನೇಕಲ್ ತಾಲೂಕಿನ ಅತ್ತಿಬೆಲೆಯ ಟಿವಿಎಸ್ ರಸ್ತೆ ಬಳಿ ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಮೃತ ಯುವಕನನ್ನು 5 ವರ್ಷಗಳಿಂದ ಅತ್ತಿಬೆಲೆಯಲ್ಲಿ ಅಲೆದಾಡುತ್ತಿದ್ದ ಸುಮಾರು 29 ವರ್ಷ ವಯಸ್ಸಿನ ಬುದ್ಧಿಮಾಂದ್ಯ ಎನ್ನಲಾಗಿದೆ.ಇಂದು ಬೆಳಿಗ್ಗೆ ಚಳಿ ಹೆಚ್ಚಿದ್ದ ಕಾರಣ ರಸ್ತೆ ಬದಿಯಲ್ಲಿ ಬಿದ್ದಿದ್ದ ಕಸಕ್ಕೆ ಬೆಂಕಿ ಹಚ್ಚುತ್ತಿದ್ದಾಗ ಯುವಕನ ಬಟ್ಟೆಗೆ ಹತ್ತಿಕೊಂಡಿದೆ. ಪರಿಣಾಮ ಒಂದರ ಮೇಲೆ ಒಂದರಂತೆ ಐದಾರು ಬಟ್ಟೆ ಧರಿಸಿದ್ದ ಯುವಕನ ಬಟ್ಟೆಗೆ ಬೆಂಕಿ ಹತ್ತಿಕೊಂಡಿದೆ. ಹೀಗಾಗಿ ಬೆಂಕಿ ಆರಿಸಲಾಗದೇ ಯುವಕ ಅಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


