ಬೆಂಗಳೂರು: ಬುದ್ಧಿಮಾಂದ್ಯ ಯುವತಿಯೊಬ್ಬಳ ಮೇಲೆ ಸ್ವಂತಃ ದೊಡ್ಡಪ್ಪನೇ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರು ಹೊರವಲಯ ಹೊಸಕೋಟೆ ತಾಲೂಕಿನ ನೀಡಘಟ್ಟ ಗ್ರಾಮದಲ್ಲಿ ನಡೆದಿದೆ.ಆರೋಪಿ ಈಜಾಜ್ ಪಾಷ (51) 21 ವರ್ಷದ ಯುವತಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದು, ಈಗ ಯುವತಿ 8 ತಿಂಗಳ ಗರ್ಭಿಣಿಯಾಗಿದ್ದಾಳೆ. ಬುದ್ಧಿಮಾಂದ್ಯ ಯುವತಿಯ ಪೋಷಕರು ಕೂಲಿ ಕೆಲಸಕ್ಕೆ ಹೋದ ನಂತರ ಪಕ್ಕದ ಮನೆಯಲ್ಲಿದ್ದ ದೊಡ್ಡಪ್ಪನೇ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಬುದ್ಧಿಮಾಂದ್ಯ ಯುವತಿ ಹೊಟ್ಟೆನೋವು ಎನ್ನುತ್ತಿದ್ದ ಪರಿಣಾಮ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ತೋರಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.ಈ ಸಂಬಂಧ ಆರೋಪಿ ಈಜಾಜ್ ಪಾಷನ ವಿರುದ್ಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇತ್ತ ಪೋಷಕರು 8 ತಿಂಗಳ ಗರ್ಭಿಣಿಯಾದ ಬುದ್ಧಿಮಾಂದ್ಯ ಮಗಳನ್ನ ಕಂಡು ಗೋಳಾಡುತ್ತಿದ್ದಾರೆ. ಪ್ರತಿನಿತ್ಯ ಮಗಳನ್ನ ಕಂಡು ಕಣ್ಣೀರಿಡುತ್ತಾ ನ್ಯಾಯಕ್ಕಾಗಿ ಬಡ ದಂಪತಿಯ ಪರದಾಟ ನಡೆಸುತ್ತಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.






 Advertisement 




Sign in to your account
Username or Email Address


Password

 Remember Me


