ವಿಜಯಪುರ: ಆಸ್ಪತ್ರೆಯ ವಾರ್ಡಿನ ಬಾತ್ ರೂಂನಲ್ಲಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.ಸ್ವಾತಿ ಹೊಸಮನಿ(28) ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಮಹಿಳೆ. ಎರಡು ದಿನಗಳ ಹಿಂದೆ ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರಿಂದ ಯುವಕ ಸುರೇಶ(24) ನಿಗೆ ಥಳಿಸಿದ್ದರು. ಈ ಸಂದರ್ಭದಲ್ಲಿ ಅತ್ಯಾಚಾರ ಮಾಡಲು ಪಕ್ಕದ ಮನೆಯಲ್ಲಿದ್ದ ಸ್ವಾತಿ ಹೊಸಮನಿ ಸಹಾಯ ಮಾಡಿದ್ದಾಳೆ ಎಂದು ಆರೋಪಿಸಿ ಆಕೆಯ ಮೇಲೂ ಗ್ರಾಮಸ್ಥರು ಹಲ್ಲೆ ಮಾಡಿದ್ದರು. ನಂತರ ಸ್ವಾತಿ ಚಿಕಿತ್ಸೆ ಪಡೆಯಲು ಜಿಲ್ಲಾಸ್ಪತ್ರೆಗೆ ಸೇರಿದ್ದರು. ಆದರೆ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಎರಡು ದಿನಗಳ ಹಿಂದೆ ವಿಜಯಪುರ ತಾಲೂಕಿನ ಹೊನಗನಹಳ್ಳಿಯ ಸುರೇಶ ಅಪ್ರಾಪ್ತೆ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿತ್ತು. ವಿಷಯ ತಿಳಿದ ಸ್ಥಳೀಯರು ಸುರೇಶನನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದರು. ನಂತರ ಗ್ರಾಮೀಣ ಪೊಲೀಸ್ ಠಾಣೆಗೆ ಆರೋಪಿಯನ್ನು ಒಪ್ಪಿಸಿದ್ದರು. ನಂತರ ಗ್ರಾಮೀಣ ಪೊಲೀಸ್ ಠಾಣಾಧಿಕಾರಿಗಳು ಆರೋಪಿಯ ವಿಚಾರಣೆ ನಡೆಸಿದ್ದರು. ಆಗ ಆರೋಪಿ ಸುರೇಶ, ನಾನು ಹಾಗೂ ಅಪ್ರಾಪ್ತ ಬಾಲಕಿ ಇಬ್ಬರೂ ಸುಮಾರು ದಿನಗಳಿಂದ ಪ್ರೀತಿ ಮಾಡುತ್ತಾ ಇದ್ದೇವೆ. ಅವಳೇ ತನ್ನ ಮನೆಗೆ ಬರಲು ಹೇಳಿದ್ದಳು. ನಾನು ಹೋದ ಸಂದರ್ಭದಲ್ಲಿ ಅವರ ಕುಟುಂಬಸ್ಥರು ತಪ್ಪಾಗಿ ತಿಳಿದುಕೊಂಡು ನಂತರ ಸ್ಥಳೀಯರು ಹಾಗೂ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದ.ಅಪ್ರಾಪ್ತ ಬಾಲಕಿಯ ಪೋಷಕರಿಂದ ಯುವಕ ಸುರೇಶ್ ಮತ್ತು ಸ್ವಾತಿ ಹೊಸಮನಿ ವಿರುದ್ಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿ ಯುವಕ ಮತ್ತು ಸ್ವಾತಿ ಹೊಸಮನಿ ಅವರಿಂದ ಗ್ರಾಮಸ್ಥರ ವಿರುದ್ಧ ಪ್ರತಿದೂರು ದಾಖಲಾಗಿತ್ತು. ಹಲ್ಲೆಯ ಬಳಿಕ ಸ್ವಯಂ ಸ್ವಾತಿ ಹೊಸಮನಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ ಆಸ್ಪತ್ರೆಯ ವಾರ್ಡಿನ ಬಾತ್ ರೂಮಿನಲ್ಲಿ ದುಪಟ್ಟಾದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಗಾಂಧಿ ಚೌಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


