ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ತಂದಿದೆ. ಹಲವು ವರ್ಷಗಳ ಕಾಲ ನಗುತ್ತಾ, ನಗಿಸುತ್ತಾ ಕನ್ನಡ ಚಿತ್ರರಸಿಕರನ್ನು ರಂಜಿಸುತ್ತಾ ಬಂದ ಕಾಶಿನಾಥ್ ಇನ್ನಷ್ಟು ಕಾಲ ನಮ್ಮ ನಡುವೆ ಇರಬೇಕಿತ್ತು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.https://youtu.be/C7kH6JcPNdo ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಇಂದು ಬೆಂಗಳೂರಿನ ಶ್ರೀಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ 4 ಗಂಟೆ ವೇಳೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದುಬೈನಿಂದ ಕಾಶಿನಾಥ್ ಅವರ ಮಗಳು ಹೊರಟಿದ್ದಾರೆ, ಸಂಜೆ 4ಕ್ಕೆ ಬೆಂಗಳೂರಿಗೆ ಬರುತ್ತಾರೆ. ಬಂದ ನಂತರ ಬೆಂಗಳೂರಿನಲ್ಲೇ ಅಂತ್ಯಸಂಸ್ಕಾರ ಮಾಡಲಾಗುತ್ತದೆ ಎಂದು ಕಾಶಿನಾಥ್ ಸಹೋದರಿ ಗಾಯಿತ್ರಿ ತಿಳಿಸಿದ್ದಾರೆ.ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ತಂದಿದೆ. ಹಲವು ವರ್ಷಗಳ ಕಾಲ ನಗುತ್ತಾ, ನಗಿಸುತ್ತಾ ಕನ್ನಡ ಚಿತ್ರರಸಿಕರನ್ನು ರಂಜಿಸುತ್ತಾ ಬಂದ ಕಾಶಿನಾಥ್ ಇನ್ನಷ್ಟು ಕಾಲ ನಮ್ಮ ನಡುವೆ ಇರಬೇಕಿತ್ತು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. pic.twitter.com/gKEGLIakPw— CM of Karnataka (@CMofKarnataka) January 18, 2018https://www.youtube.com/watch?v=JY1P-IPdVQESign in to your account
Username or Email Address


Password

 Remember Me


