ಬೆಂಗಳೂರು: ಶಾಲೆಗೆ ತೆರಳಿದ್ದ ತನ್ನ ಮಗುವನ್ನು ವಾಪಸ್ ಮನೆಗೆ ಕರೆತರಲು ತೆರಳುತ್ತಿದ್ದ ತಾಯಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನಪ್ಪಿರುವ ಧಾರುಣ ಘಟನೆ ಸಂಭವಿಸಿದೆ.ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ದಾಸನಪುರದ ಬಳಿ ನಡೆದಿದೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಅಪಘಾತವಾದ ಬಳಿಕ, ದಾಸನಪುರ ನಿವಾಸಿ ಸುದಾ ಎಂಬ ಮಹಿಳೆಗೆ ಅಪ್ಪಳಿಸಿದೆ.ಈ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲಿ ಸಾವನಪ್ಪಿದ್ದರೆ, ಎರಡು ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲದೆ ಈ ಘಟನಾ ಸ್ಥಳದಲ್ಲಿ ಸ್ಕೈವಾಕ್ ಇಲ್ಲದೇ ಇರುವ ಕಾರಣ ಮಹಿಳೆ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


