ಕಲಬುರಗಿ: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ನಡೆದಿದ್ದು, ಪೊಲೀಸ್ ಕಿರುಕುಳವೇ ಯುವಕನ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ.ರಮೇಶ್ ತಳವಾರ್(24) ಆತ್ಮಹತ್ಯೆ ಮಾಡಿಕೊಂಡ ಯುವಕ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಜೇವರ್ಗಿ ಪಟ್ಟಣದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದರು.ಜೇವರ್ಗಿ ಠಾಣೆಯ ಪೇದೆ ಕಿರುಕುಳ ನೀಡುತ್ತಿದ್ದರು ಎಂದು ರಮೇಶ್ ಸಂಬಂಧಿಕರು ಆರೋಪಿಸಿದ್ದಾರೆ. ಕೆಲ ದಿನಗಳ ಹಿಂದೆ ರಮೇಶ್ ತ್ರಿಬಲ್ ರೈಡಿಂಗ್ ಹೋಗಿದ್ದಕ್ಕಾಗಿ ಮಲ್ಲು ಬಾಸಗಿ ಎಂಬ ಪೇದೆ ಪ್ರತಿನಿತ್ಯ ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು ಎಂದು ಆರೋಪ ಮಾಡಿದ್ದಾರೆ.ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Sign in to your account
Username or Email Address


Password

 Remember Me


