ಕೋಲಾರ: 32 ವರ್ಷದ ಇಬ್ಬರು ಮಕ್ಕಳ ತಂದೆ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.ಕೋಲಾರದ ಮಾಲೂರು ತಾಲೂಕಿನ ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಭಾನುವಾರ ಮಾಸ್ತಿ ಪೊಲೀಸ್ ಠಾಣೆಗೆ ದೂರು ನೀಡಿದರೂ ಸ್ವೀಕರಿಸಿರಲಿಲ್ಲ ಎನ್ನಲಾಗಿದೆ. ಸೋಮವಾರ ಬಾಲಕಿ ಹೇಳಿಕೆ ಆಧರಿಸಿ ಮಾಸ್ತಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.35 ವರ್ಷದ ಇಬ್ಬರು ಮಕ್ಕಳ ತಂದೆಯಿಂದ ಈ ಕೃತ್ಯ ನಡೆದಿದ್ದು, ಗರ್ಭಿಣಿ ಅಕ್ಕನಿಗೆ ಸಹಾಯ ಮಾಡಲು ಬಂದಿದ್ದ ಬಾಲಕಿಯ ಕೈ, ಕಾಲು ಕಟ್ಟಿಹಾಕಿ ಬಾಯಿಗೆ ಬಟ್ಟೆ ತುರುಕಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನ ನಡೆಸಿದ್ದಾನೆ ಎಂದು ಬಾಲಕಿ ದೂರಿನಲ್ಲಿ ಹೇಳಿದ್ದಾಳೆ. ಅಲ್ಲದೆ ಮನೆಯಲ್ಲಿ ಹೇಳಿದರೆ ಕೊಲೆ ಮಾಡುವುದಾಗಿ ಬಾಲಕಿಗೆ ಬೆದರಿಕೆ ಹಾಕಿರುವ ಆರೋಪಿ ಕೃತ್ಯದ ನಂತರ ಪರಾರಿಯಾಗಿದ್ದ.ಸದ್ಯ ಮಾಸ್ತಿ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.Sign in to your account
Username or Email Address


Password

 Remember Me


