ಬೆಳಗಾವಿ: ಕಾರ್ ಮರಕ್ಕೆ ಗುದ್ದಿದ ಪರಿಣಾಮ ಹಿರಿಯ ಪತ್ರಕರ್ತರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ  ನಂದಗಡದಲ್ಲಿ ನಡೆದಿದೆ.ಮೃತ ದುರ್ದೈವಿ ಪತ್ರಕರ್ತರನ್ನು ಡಾ. ವೀರೇಶ್ ಹಿರೇಮಠ್ ಎಂದು ಗುರುತಿಸಲಾಗಿದೆ. ಇನ್ನು ಘಟನೆಯಲ್ಲಿ ಪತ್ನಿ ಗೌರಿ, ಕಾರು ಚಾಲಕ ಸುನೀಲ್‍ಗೆ ಗಂಭೀರ ಗಾಯಗಳಾಗಿವೆ.ಬಾಗಲಕೋಟಿ ಬಿವಿವಿ ಕಾಲೇಜಿನಲ್ಲಿ ಪತ್ರಿಕೋದ್ಯಮ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ವೀರೇಶ್ ಅವರು ತಮ್ಮ ಕುಟುಂಬದೊಂದಿಗೆ ಗೋವಾ ಪ್ರವಾಸ ಮುಗಿಸಿ ಬಾಗಲಕೋಟೆಗೆ ಹಿಂದಿರುಗುತ್ತಿದ್ದರು. ಅಂತೆಯೇ ಕಾರ್ ನಂದಗಡ ಬಳಿ ಬರುತ್ತಿದ್ದಂತೆಯೇ ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಮರಕ್ಕೆ ಗುದ್ದಿದೆ ಎನ್ನಲಾಗಿದೆ.ಸದ್ಯ ವೀರೇಶ್ ಮೃತದೇಹವನ್ನು ಧಾರವಾಡ ಸಿವಿಲ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಘಟನೆ ಸಂಬಂಧ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


