ಹಾವೇರಿ: ಬೈಕ್ ಸವಾರನನ್ನ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿಯಾಗಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಹಾವೇರಿಯಲ್ಲಿ ನಡೆದಿದೆ.ಜಿಲ್ಲೆಯ ರಾಣೇಬೆನ್ನೂರು ನಗರದ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದ್ದು, ಖಾಸಗಿ ಬಸ್ ಬೆಂಗಳೂರಿನಿಂದ ಹುಬ್ಬಳ್ಳಿಯತ್ತ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಇನ್ನು ಬಸ್ ನಲ್ಲಿದ್ದ 20 ಕ್ಕೂ ಅಧಿಕ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಸ್ಥಳಕ್ಕೆ ರಾಣೇಬೆನ್ನೂರು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ರಾಣೇಬೆನ್ನೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Sign in to your account
Username or Email Address


Password

 Remember Me


