ಬೆಂಗಳೂರು: ಕರ್ನಾಟಕದ ಬಿಜೆಪಿಯಲ್ಲಿ (Karnataka BJP) ಕೆಲವರಿಗೆ ದುರಹಂಕಾರ ಬಂದಿದೆ. ಈ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ (MP Renukacharya) ವಾಗ್ದಾಳಿ ನಡೆಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ಪಕ್ಷದವರ ವಿರುದ್ಧವೇ ಹರಿಹಾಯ್ದರು. ಪಕ್ಷ ಸೋತ ನಂತರ ಎಲ್ಲರನ್ನೂ ಕರೆದು ಮಾತಾಡಿಸಬೇಕು. ಯಡಿಯೂರಪ್ಪ ಹಿಂದೆಲ್ಲ ಆ ಕೆಲಸ ಮಾಡಿದ್ರು. ಆದರೆ ಬಿಜೆಪಿಯಲ್ಲಿ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಕಿಡಿಕಾರಿದರು.ಬೇಸತ್ತು ಹೋಗಿರುವವರು ಮುಂದೆ ಪಕ್ಷ ಬಿಡಬಹುದು. ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಅಂತ ಜನ ಮಾತಾಡ್ತಿದ್ದಾರೆ. ನಾನು ಹೇಳ್ತಿಲ್ಲ, ಜನ ಹಾಗೆ ಹೇಳ್ತಿದ್ದಾರೆ. ಹಲವರು ಪಕ್ಷದಲ್ಲಿ ಮಾತಾಡಲು ಭಯಪಡುತ್ತಿದ್ದಾರೆ. ಬಿಜೆಪಿಗೆ ಮಧ್ಯದಲ್ಲಿ ಯಾರು ಬಂದಿದ್ದಾರೋ ಅವರ ಆಟವೇ ಜಾಸ್ತಿ ಆಗ್ತಿದೆ ಎಂದರು. ಇದನ್ನೂ ಓದಿ: 20 ಕೋಟಿ ಕೊಡಿ, ಇಲ್ಲದಿದ್ದರೆ ಕೊಲೆ ಮಾಡ್ತೀವಿ: ಮುಕೇಶ್ ಅಂಬಾನಿಗೆ ಬೆದರಿಕೆರಾಜಕೀಯದಲ್ಲಿ ಗಾಡ್ ಫಾದರ್ ಬೇಕು. ಯಡಿಯೂರಪ್ಪ ಅವರಿಗೆ ಆ ಸಾಮರ್ಥ್ಯ ಇತ್ತು. ಯಡಿಯೂರಪ್ಪ (BS Yediyurappa) ಅವರ ನಾಯಕತ್ವ ಪಕ್ಷ ಗಟ್ಟಿಗೊಳಿಸಿದೆ. ಈಗಿನ ಪರಿಸ್ಥಿತಿಗೆ ಈಗಾಗಲೇ ಕೆಲವರು ಪಕ್ಷದಿಂದ ಹೊರಗೆ ಹೋಗಿದ್ದಾರೆ. ಅಭದ್ರತೆಯಿಂದ ಯಾರು ಬೇಕಾದರೂ ಪಕ್ಷ ಬಿಟ್ ಹೋಗಬಹುದು. ಮೋದಿಯವ್ರು ಯಡಿಯೂರಪ್ಪ ಅವರನ್ನು ಕಡೆಗಣಿಸಿಲ್ಲ. ಮಧ್ಯದಲ್ಲಿ ಇರೋರು ಕೆಲವರು ಯಡಿಯೂರಪ್ಪ ಅವರನ್ನು ಕಡೆಗಣಿಸ್ತಿದ್ದಾರೆ ಎಂದರು.ನಾನು ಯಡಿಯೂರಪ್ಪ ಗರಡಿಯಲ್ಲಿ ಬೆಳೆದವನು. ಬಿಜೆಪಿ ಬಿಡ್ತೇನೆ ಅಂತ ಎಲ್ಲೂ ಹೇಳಿಲ್ಲ. ಕಾಂಗ್ರೆಸ್ ಸೇರುತ್ತೇನೆ ಅಂತ ಹೇಳಿಲ್ಲ. ಪಕ್ಷ ಕಟ್ಟೋಣ ಅಂತ ಯಡಿಯೂರಪ್ಪ ಹೇಳಿದ್ದಾರೆ. ನಾವು ಕಾದು ನೋಡುತ್ತೇವೆ. ಆದರೆ ಪಕ್ಷ ಬಿಡುವ ಬಗ್ಗೆ ಕೆಲವರು ಅಪಪ್ರಚಾರ ಮಾಡ್ತಿದ್ದಾರೆ ಎಂದು ಗರಂ ಆದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


