ಚಿತ್ರದುರ್ಗ: ಈ ಹಿಂದೆ ಪ್ರಧಾನಮಂತ್ರಿಯವರು ನವಿಲು ಗರಿ (Peacock feather)  ಧರಿಸಿದ್ದರು, ನವಿಲು ಸಾಕಿದ್ದರು. ಹಾಗೆಂದ ಮಾತ್ರಕ್ಕೆ ಪೊಲೀಸರು (Police) ಅವರನ್ನು ಹಿಡಿದುಕೊಂಡು ಹೋಗಬೇಕಾ? ಫ್ಯಾಷನ್‌ಗಾಗಿ ಹುಲಿ ಉಗುರು ಇತರೆ ವಸ್ತು ಬಳಸುವುದು ಸರಿಯಲ್ಲ, ವನ್ಯಜೀವಿ ಸಂರಕ್ಷಣೆ ಕಾಯ್ದೆ ಉಲ್ಲಂಘಿಸಿದವರು ಯಾರೇ ಆಗಿರಲಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (BK Hariprasad) ಆಗ್ರಹಿಸಿದ್ದಾರೆ.ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಲಿ ಉಗುರು, ಕರಡಿ ಕೂದಲು ಸೇರಿದಂತೆ ಆನೆ ಕೂದಲು, ದಂತ ಹಾಗೂ ಇತರೆ ವಸ್ತುಗಳನ್ನು ಧರಿಸಿ ಕಾಡುಪ್ರಾಣಿಗಳನ್ನು ಅಣಕಿಸುವ ಕಾರ್ಯಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಕಬ್ಬು ಬೆಳೆಯುವ ಉತ್ಸಾಹ – 20 ವರ್ಷಗಳಿಂದ ಮುಚ್ಚಿದ ಸಕ್ಕರೆ ಫ್ಯಾಕ್ಟರಿಯನ್ನು ತೆರೆಯಲು ಸರ್ಕಾರದ ಬೆನ್ನತ್ತಿದ ರೈತರುಇದೇ ವೇಳೆ ದರ್ಗಾದಲ್ಲಿ, ಮೌಲ್ವಿಗಳಿಂದ ನವಿಲು ಗರಿ ಬಳಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರಧಾನ ಮಂತ್ರಿಗಳೂ (Prime Minister) ನವಿಲು ಸಾಕಿದ್ದರು, ನವಿಲು ಗರಿ ಧರಿಸಿದ್ದರು. ಹಾಗಂತ ಪ್ರಧಾನಿಯವರನ್ನ ಪೊಲೀಸರು ಹಿಡಿದುಕೊಂಡು ಹೋಗಬೇಕಾ? ದರ್ಗಾಗಳಲ್ಲಿ ಮೌಲ್ವಿಗಳು ಬಳಸುವ ನವಿಲುಗರಿ ಕೂಡ ನೈಸರ್ಗಿಕವಾಗಿ ಉದುರುತ್ತದೆ. ಒಂದು ವೇಳೆ ನವಿಲನ್ನು ಕೊಂದು ಗರಿ ತಂದಿದ್ದರೆ ಅಂಥವರ ವಿರುದ್ಧವೂ ಕ್ರಮವಾಗಬೇಕು ಎಂದು ಒತ್ತಾಯಿಸಿದ್ದಾರೆ.ಇದೇ ವೇಳೆ ಎರಡೂವರೆ ವರ್ಷಗಳ ಬಳಿಕ ಸಿಎಂ ಬದಲಾವಣೆ ವಿಚಾರ ಯಾರಿಗೂಗೊತ್ತಿಲ್ಲ. ಅದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮುಖಂಡರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ರಾಜ್ಯ ಉಸ್ತುವಾರಿ ಸುರ್ಜೆವಾಲಾ ಸೇರಿದಂತೆ ವೇಣುಗೋಪಾಲ್ ಮತ್ತು ಸಿಎಂ, ಡಿಸಿಎಂಗೆ ಮಾತ್ರ ಗೊತ್ತಿದೆ. ಆ ಬಗ್ಗೆ ಬೇರೆ ಯಾರೂ ಹೇಳೋಕಾಗಲ್ಲ. ಅವರವರ ವೈಯಕ್ತಿಕ ಅಭಿಪ್ರಾಯ ಹೇಳಬಹುದು ಅಷ್ಟೇ ಎಂದು ಜಾರಿಕೊಂಡಿದ್ದಾರೆ. ಇದನ್ನೂ ಓದಿ: ಕಾರ್ಯಕರ್ತರಲ್ಲಿ ಸಾಮರಸ್ಯ ಮೂಡದಿದ್ರೆ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಸಂಘರ್ಷವಾಗಲಿದೆ: ರೇಣುಕಾಚಾರ್ಯಶಾಸಕರ ಟೀಂ ಜೊತೆ ಸಚಿವ ಸತೀಶ್ ಜಾರಕಿಹೊಳಿ ದುಬೈ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ದುಬೈ ರೀತಿ ರಾಜ್ಯದ ಅಭಿವೃದ್ಧಿಗಾಗಿ ಶಾಸಕರನ್ನು ಸತೀಶ್ ಕರೆದೊಯ್ದರೆ ಆಶ್ಚರ್ಯವಿಲ್ಲ. ಅದನ್ನು ತಪ್ಪಾಗಿ ಅರ್ಥೈಸಿಕೊಳ್ಳಬಾರದು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್; ಆರೋಪಿ ಸುಳಿವು ಕೊಟ್ಟವರಿಗೆ 2 ಲಕ್ಷ ರೂ. ಬಹುಮಾನ ಘೋಷಿಸಿದ NIAWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


