ಹಾಸನ: ಕಾಡಾನೆ ದಾಳಿಗೆ (Elephant Attack) ಕೂಲಿ ಕಾರ್ಮಿಕ ಸಾವಿಗೀಡಾದ ಘಟನೆ ಬೇಲೂರಿನ ಅಂಕಿಹಳ್ಳಿ ಎಂಬಲ್ಲಿ ನಡೆದಿದೆ.ಮೃತನನ್ನು ಪಶ್ಚಿಮ ಬಂಗಾಳದ (West Bengal) ದೀಪಕ್ ರಾಯ್ ಎಂದು ಗುರುತಿಸಲಾಗಿದೆ. ಮೃತನ ಕುಟುಂಬಸ್ಥರು ಪಶ್ಚಿಮ ಬಂಗಾಳದಿಂದ ಆಗಮಿಸಬೇಕಿದೆ. ಇದರಿಂದ ಆತನ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಆಸ್ಪತ್ರೆಯ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿದೆ. ಇದನ್ನೂ ಓದಿ: ದುಬೈ ಪ್ರವಾಸಕ್ಕೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿದಿನಸಿ ತರಲು ಅಂಗಡಿಗೆ ತೆರಳುತ್ತಿದ್ದ ವೇಳೆ ಆನೆ ಏಕಾಏಕಿ ದಾಳಿ ನಡೆಸಿತ್ತು. ಈ ವೇಳೆ ಎದೆ ಹಾಗೂ ತಲೆ ಭಾಗವನ್ನು ಆನೆ ತುಳಿದಿತ್ತು. ಇದರಿಂದ ಆತ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.ನಾಲ್ಕು ದಿನಗಳ ಹಿಂದೆ ಸಹ ಕಾಡಾನೆಯೊಂದು ಕಾರನ್ನು ಅಡ್ಡ ಹಾಕಿ ಅದರಲ್ಲಿದ್ದ ವಿದ್ಯಾರ್ಥಿನಿಯನ್ನು ಹೊರಗೆಳೆದು ತುಳಿದಿತ್ತು. ಇದರಿಂದ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಳು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಹಾಗೂ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಮುಂದಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕಾರಿನಲ್ಲಿದ್ದ ಬಾಲಕಿಯನ್ನು ಹೊರಗೆಳೆದು ತುಳಿದ ಆನೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


