ಚಿಕ್ಕಬಳ್ಳಾಪುರ: ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡುತ್ತಿದ್ದ ಯಡಿಯೂರಪ್ಪ ಅವರು ಆಜಾನ್ ಕೇಳಿ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ಘಟನೆದ ಬಿಜೆಪಿ ಪರಿವರ್ತನಾ ಯಾತ್ರೆ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಮಸೀದಿಯಿಂದ ಆಜಾನ್ ಕೇಳಿದ ತಕ್ಷಣ ಭಾಷಣ ನಿಲ್ಲಿಸಿದರು.ಇದಕ್ಕೂ ಮುನ್ನ ಗೌರಿಬಿದನೂರಿನ ಸಮಾವೇಶದ ವೇಳೆ ಪಬ್ಲಿಕ್ ಟಿವಿ ಜೊತೆ ಮತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ತುಘಲಕ್ ದರ್ಬಾರ್ ನಡೆಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ. ದೇಶದ ಎಲ್ಲಾ ಕಡೆ ಕಾಂಗ್ರೆಸ್ ನೆಲ ಕಚ್ಚಿ ಅಸ್ತಿತ್ವ ಕಳೆದುಕೊಂಡಿದ್ದು ಸಿದ್ದರಾಮಯ್ಯ ಸರ್ಕಾರದ ಹಗರಣಗಳ ತನಿಖೆ ನಡೆದರೆ ಯಾರು ಜೈಲಿಗೆ ಹೋಗುತ್ತಾರೆ. ಯಾರು ಮನೆ ಹೋಗುತ್ತಾರೆ ಗೊತ್ತಾಗುತ್ತೆ. ಸಿದ್ದರಾಮಯ್ಯ ಸರ್ಕಾರ ಮನೆಗೆ ಹೋಗೋದು ಗ್ಯಾರಂಟಿ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಸಹ ಸರ್ಕಾರದ ಸಾಧನಾ ಸಮಾವೇಶದ ವೇಳೆ ಆಜಾನ್ ಕೇಳಿ ತಮ್ಮ ಭಾಷಣವನ್ನು ನಿಲ್ಲಿಸಿ ಸುದ್ದಿಯಾಗಿದ್ದರು.Sign in to your account
Username or Email Address


Password

 Remember Me


