ಬೆಂಗಳೂರು: ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ.ಈ ಹಿಂದೆ ನಡೆಸಿದ ಸಾರಿಗೆ ಮುಷ್ಕರದ ವೇಳೆ ನೀಡಿದ್ದ ನಮ್ಮ ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ಇದೇ 30ನೇ ತಾರೀಖಿನಂದು ಸೇವೆಯನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲಿದ್ದೇವೆ ಎಂದು ಎಐಟಿಯುಸಿ  ಕಾರ್ಯದರ್ಶಿ ನಾಗರಾಜ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.30 ರಂದು ಉಪವಾಸ ಸತ್ಯಗ್ರಹ ಆರಂಭಿಸಲು ಸಾರಿಗೆ ಇಲಾಖೆಯ ಸಿಬ್ಬಂದಿ ನಿರ್ಧರಿಸಿದ್ದಾರೆ. ಅಂದು ಬಸ್ ಸೇವೆ ಸ್ಥಗಿತಗೊಂಡು ಸಾರ್ವಜನಿಕರಿಗೆ ತೊಂದರೆ ಆದರೆ ಅದಕ್ಕೆ ನಾವು ಹೊಣೆಯಲ್ಲ ಎಂದು ಅವರು ಹೇಳಿದರು. ಇದನ್ನೂ ಓದಿ: ಹೆಲ್ಮೆಟ್ ಹಾಕಿ ಬಸ್ ಚಲಾಯಿಸಿದ ಚಾಲಕ- ಕಾರಣ ಕೇಳಿದ್ರೆ ನಿಮಗೆ ಇಷ್ಟವಾಗುತ್ತೆSign in to your account
Username or Email Address


Password

 Remember Me


