ಬೆಂಗಳೂರು: ಗರ್ಲ್ ಫ್ರೆಂಡ್ ಜೊತೆ ಸೇರಿಕೊಂಡು ಪತ್ನಿ ಹಾಗೂ ತನ್ನ ತಾಯಿಯ ಮೇಲೆ ಪತಿರಾಯನೊಬ್ಬ ಹಲ್ಲೆ ಮಾಡಲು ಯತ್ನಿಸಿದ ಘಟನೆ ಬೆಂಗಳೂರಿನ ಪುಲಿಕೇಶಿನಗರದಲ್ಲಿ ನಡೆದಿದೆ.ರೋಹಿತ್ ತನ್ನ ಕುಟುಂಬದವರ ಮೇಲೆ ಹಲ್ಲೆಗೆ ಯತ್ನಿಸಿರೋ ವ್ಯಕ್ತಿ. ರೋಹಿತ್ ತನ್ನ ಪ್ರೇಯಸಿ ಅಬಂತಿಕಾ ಜೊತೆ ಸೇರಿ ಪತ್ನಿ ಸ್ನೇಹಾ ಹಾಗೂ ತಾಯಿ ನಂದಾರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ. ಆರು ವರ್ಷಗಳ ಹಿಂದೆ ಸ್ನೇಹಾ ಅವರನ್ನ ಮದುವೆಯಾಗಿದ್ದ ರೋಹಿತ್, ಇತ್ತೀಚಿನ ದಿನಗಳಲ್ಲಿ ಅಬಂತಿಕಾಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ.ಈ ಬಗ್ಗೆ ಮನೆಯಲ್ಲಿ ಪ್ರಶ್ನಿಸಿದ್ದಕ್ಕೆ ತಾಯಿ ಮತ್ತು ಹೆಂಡತಿ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ ಈ ಭೂಪ. ಪ್ರೇಯಸಿ ಮಾತಿಗೆ ಮರುಳಾಗಿ ಪತ್ನಿ ಸ್ನೇಹಾಗೆ ಡೈವೋರ್ಸ್ ನೀಡುವಂತೆ ಪದೇ ಪದೇ ಕಿರುಕುಳ ನೀಡುತ್ತಿದ್ದಾನೆ. ಇದಕ್ಕೆ ಒಲ್ಲೆ ಎಂದಾಗ ಸಾಕಷ್ಟು ಬಾರಿ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ.ಮಂಗಳವಾರ ರಾತ್ರಿ ರೋಹಿತ್ ಮತ್ತು ಅಬಂತಿಕಾ ಇಬ್ಬರು ಸೇರಿ ಮನೆ ಹತ್ತಿರ ಬಂದು ಗಲಾಟೆ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಪತ್ನಿ ಸ್ನೇಹ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ.ಸದ್ಯ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರೋ ಪುಲಿಕೇಶಿ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


