ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ಇಂಜಿನ್ ಕೆಳಗೆ ಸಿಲುಕಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಕೆಲವರಕೊಪ್ಪ ಗ್ರಾಮದ ಬಳಿ ನಡೆದಿದೆ.ಮೃತ ವ್ಯಕ್ತಿಯನ್ನ ಮಂಜುನಾಥ ಕಡೇಮನಿ (18) ಎಂದು ಗುರುತಿಸಲಾಗಿದೆ. ಮೃತ ಮಂಜುನಾಥ ಕಬ್ಬಿನ ಗದ್ದೆಗೆ ಕೂಲಿ ಕಾರ್ಮಿಕರನ್ನ ಬಿಟ್ಟು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಇಂಜಿನ್ ಕೆಳಗೆ ಸಿಕ್ಕಿಹಾಕಿಕೊಂಡಿದ್ದ ಮೃತದೇಹವನ್ನು ಹೊರಕ್ಕೆ ತೆಗೆಯಲು ಸ್ಥಳೀಯರು ಹಾಗೂ ಪೊಲೀಸರು ಕೆಲಕಾಲ ಹರಸಹಾಸ ಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಆಡೂರು ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


