ಚಿಕ್ಕಬಳ್ಳಾಪುರ: ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದು, ಬೆಂಕಿಯಿಂದ ಒದ್ದಾಡುತ್ತಿದ್ದ ಪತ್ನಿಯನ್ನು ಬಿಗಿದಪ್ಪಿ ಹಿಡಿದ ಕಾರಣ ಪತಿಯೂ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ.ನಗರದ 35 ವರ್ಷದ ಚಂದ್ರಕಲಾ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಶಂಕರ್ ಪತ್ನಿಯನ್ನ ರಕ್ಷಿಸಲು ಮುಂದಾಗಿದ್ದಾರೆ. ಘಟನೆಯಲ್ಲಿ ಚಂದ್ರಕಲಾ ದೇಹದ ಶೇ.80 ರಷ್ಟು ಹಾಗೂ ಪತಿ ಶಂಕರ್ ಶೇ.30 ರಷ್ಟು ಭಾಗ ಸುಟ್ಟು ಹೋಗಿದ್ದು, ಬಾಗೇಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಸದ್ಯ ಪ್ರಾಥಮಿಕ ಚಿಕಿತ್ಸೆ ನಂತರ ಇಬ್ಬರನ್ನ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವ ಕಾರಣಕ್ಕೆ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ.Sign in to your account
Username or Email Address


Password

 Remember Me


