ಮಂಡ್ಯ: ಕುಟುಂಬದವರೊಂದಿಗೆ ದೇವಾಲಯಕ್ಕೆ ಬಂದಿದ್ದ ಪೊಲೀಸ್ ಪೇದೆಯೊಬ್ಬರು ಕೊಳದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಂದೇಗಾಲ ಸಮೀಪ ಮತ್ತಿತಾಳೇಶ್ವರ ದೇವಾಲಯದ ಬಳಿ ನಡೆದಿದೆ.ಬೇಗೂರು ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕೆಲಸ ಮಾಡುತ್ತಿದ್ದ 39 ವರ್ಷದ ಚಂದ್ರಶೇಖರ್ ಮೃತ ದುರ್ದೈವಿ. ಗುಂಡ್ಲುಪೇಟೆ ಮೂಲದ ಚಂದ್ರಶೇಖರ್ ಕುಟುಂಬದವರೊಂದಿಗೆ ಮತ್ತಿತಾಳೇಶ್ವರ ದೇವಾಲಯಕ್ಕೆ ಪೂಜೆಗೆಂದು ಆಗಮಿಸಿದ್ರು. ಪೂಜೆಗೂ ಮುನ್ನ ದೇವಾಲಯದ ಸಮೀಪವೇ ಇರುವ ಕೊಳದಲ್ಲಿ ಚಂದ್ರಶೇಖರ್ ಸ್ನಾನ ಮಾಡಲು ಹೋಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಚಂದ್ರಶೇಖರ್ ಸಾವನ್ನಪ್ಪಿದ್ದಾರೆ.ಚಂದ್ರಶೇಖರ್ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


