ತುಮಕೂರು: ಜೈನ ಸಮುದಾಯಕ್ಕೆ ಸೇರಿದ ಯುವತಿಯೊಬ್ಬರು ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿದ್ದು, ಇದೀಗ ಆಕೆಯ ಪೋಷಕರು ಪೊಲೀಸ್ ಠಾಣೆಯಲ್ಲಿ ಕಣ್ಣೀರು ಹಾಕುತ್ತಿದ್ದಾರೆ.ತುಮಕೂರಿನ ಕುಂಕುಮಹಳ್ಳಿ 26 ವರ್ಷದ ಯುವತಿ 30 ವರ್ಷದ ಮುಸ್ಲಿಂ ವ್ಯಕ್ತಿ ಸಾಜಿದ್ ನನ್ನು ಪ್ರೀತಿಸಿ ಮದುವೆ ಆಗಿದ್ದಾರೆ. ಸಾಫ್ಟ್ ವೇರ್ ಕಂಪನಿಯಲ್ಲಿ  ಯುವತಿ  ಕೆಲಸ ಮಾಡುತ್ತಿದ್ದಾರೆ. ಸಾಜಿದ್ ಆಟೋ ಚಾಲಕರಾಗಿದ್ದು, ಇವರಿಬ್ಬರೂ ಒಂದೇ ಊರಿನವರಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಯುವತಿಯ ಪೋಷಕರು ಮಗಳು ಕಾಣೆಯಾಗಿದ್ದಾಳೆ ಎಂದು ತುಮಕೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಇಂದು ಯುವತಿಯನ್ನು ಪತ್ತೆ ಮಾಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಯುವತಿ, ನಾವಿಬ್ಬರು ಪ್ರೀತಿಸಿ ಮದುವೆ ಆಗಿದ್ದೇವೆ. ಐದು ವರ್ಷದಿಂದ ಪ್ರೀತಿ ಮಾಡುತ್ತಿದೆವು ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.26 ವರ್ಷದ ಯುವತಿ ನಾಪತ್ತೆಯಾಗಿದ್ದಾರೆ ಎಂದು ನಮ್ಮ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸಿಕೊಂಡಿದ್ದು, ಇಂದು ಯುವತಿಯನ್ನು ಪತ್ತೆ ಮಾಡಿದ್ದೇವೆ. ಈ ಬಗ್ಗೆ ಹುಡುಗಿಯನ್ನು ವಿಚಾರಿಸಿದಾಗ ಸುಮಾರು ವರ್ಷಗಳಿಂದ ಆಕೆ ಅನ್ಯ ಕೋಮಿಯ ಹುಡುನನನ್ನು ಪ್ರೀತಿ ಮಾಡುತ್ತಿದ್ದರು. ಆದ್ದರಿಂದ 15 ದಿನಗಳ ಹಿಂದೆ ಡಿಸೆಂಬರ್ 13 ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ. ನಂತರ ಬೆಂಗಳೂರಿನ ಒಂದು ದೇವಸ್ಥಾನದಲ್ಲಿ ಇಬ್ಬರೂ ಹಿಂದೂ ಧರ್ಮದ ಪ್ರಕಾರ ಮದುವೆಯಾಗಿದ್ದಾರೆ ಎಂದು ಯುವತಿ ತಿಳಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.ಯುವತಿಯ ಪೋಷಕರು ನಾಪತ್ತೆ ದೂರು ನೀಡಿದ್ದರಿಂದ ಅವರನ್ನು ಪೊಲೀಸ್ ಠಾಣೆಗೆ ಕರೆಸಿದ್ದೇವೆ. ನ್ಯಾಯಾಧೀಶರ ಮುಂದೆ ಒಂದು ಹೇಳಿಕೆಯನ್ನು ರೆಕಾರ್ಡ್ ಮಾಡಿ ಮಾತನಾಡಿ ನಾವು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.






 Advertisement 




Sign in to your account
Username or Email Address


Password

 Remember Me


