ಬೆಂಗಳೂರು: ಹೊತ್ತು-ಹೆತ್ತು ಸಾಕಿ ಸಲುಹಿದ ತಾಯಿಯೊಬ್ಬರು ಮಗನ ಕೈಯಿಂದಲೇ ಬರ್ಬರವಾಗಿ ಹತ್ಯೆಗೀಡಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಈ ಘಟನೆ ಆಡುಗೋಡಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಲಕ್ಷ್ಮೀ(80) ಮೃತ ದುರ್ದೈವಿಯಾಗಿದ್ದು, ಪ್ರಕರಣ ಸಂಬಂಧ ಮಗ ಸೆಲ್ವರಾಜ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.ಜ.4 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಮದ್ಯಪಾನ ಮಾಡಲು ಹಣ ನೀಡುವಂತೆ ತಾಯಿಯನ್ನು ಮಗ ಸೆಲ್ವರಾಜ್ ಪೀಡಿಸಿದ್ದಾನೆ. ಈ ವೇಳೆ ಹಣ ನೀಡಲು ತಾಯಿ ನಿರಾಕರಿಸಿದ್ದಕ್ಕೆ ಸಿಟ್ಟಾದ ಮಗ ತಾಯಿಯ ತಲೆಯನ್ನು ಗೋಡೆಗೆ ಗುದ್ದಿ ಬರ್ಬರವಾಗಿ ಕೊಲೆಗೈದಿದ್ದಾನೆ.ಘಟನೆ ಸಂಬಂಧ ಆಡಿಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


