ಮೈಸೂರು: ನಂಜನಗೂಡಿನ ಶ್ರೀಕಂಠೇಶ್ವರ ಸನ್ನಿಧಿಯಲ್ಲಿ ಹೈಡ್ರಾಮಾ ನಡೆದಿದ್ದು ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.ತುಲಾಭಾರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭಿಲಾಷ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಅವ್ಯವಹಾರದ ಆರೋಪ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳು ಲೆಕ್ಕ ಪರಿಶೋಧನೆ ಮಾಡುತ್ತಿದ್ದರು. ಈ ವೇಳೆ ಲಕ್ಷಾಂತರ ರೂ. ಅವ್ಯವಹಾರ ಬಯಲಾದ ಹಿನ್ನೆಲೆಯಲ್ಲಿ ಗಲಿಬಿಲಿಗೊಂಡ ಅಭಿಲಾಷ್ ಅಧಿಕಾರಿಗಳ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಪರಿಶೀಲನೆ ನಡೆಸಲು ಬಂದ ಅಧಿಕಾರಿಗಳ ಮುಂದೆಯೇ ಮಾತ್ರೆ ನುಂಗಿ ಅಭಿಲಾಷ್ ಆತ್ಮಹತ್ಯೆ ಯತ್ನಿಸಿದ್ದಾರೆ. ಸದ್ಯ ಖಾಸಗಿ ಕ್ಲಿನಿಕ್ ಗೆ ಅಭಿಲಾಷ್ ದಾಖಲಾಗಿದ್ದಾರೆ.Sign in to your account
Username or Email Address


Password

 Remember Me


