ಚಿಕ್ಕಮಗಳೂರು: ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಬಿಕಾಂ ವಿದ್ಯಾರ್ಥಿನಿ ಧನ್ಯಶ್ರೀ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ನೈತಿಕ ಪೊಲೀಸ್‍ಗಿರಿಗೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.ಈ ಪ್ರಕರಣದ ಸಂಬಂಧ ಬಿಜೆಪಿ ಯುವ ಮೋರ್ಚಾ ನಗರಾಧ್ಯಕ್ಷ ಅನಿಲ್ ನನ್ನು ಬಂಧಿಸಲಾಗಿದೆ. ವಾಟ್ಸಪ್ ಸಂದೇಶ ನೋಡಿ ಅನಿಲ್ ಧನ್ಯಶ್ರೀ ಜೊತೆ ಮಾತನಾಡಿ ಬಳಿಕ ಪೋಷಕರಿಗೆ ವಿಚಾರ ತಿಳಿಸಿ ಮಗಳಿಗೆ ಬುದ್ಧಿವಾದ ಹೇಳುವಂತೆ ಹೇಳಿದ್ದಾನೆ. ಈ ಎಲ್ಲ ಘಟನೆಯಿಂದ ಮನನೊಂದು ಧನ್ಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನುವ ಪ್ರಾಥಮಿಕ ಮಾಹಿತಿ ಪೊಲೀಸ್ ತನಿಖೆಯಿಂದ ಈಗ ಬೆಳಕಿಗೆ ಬಂದಿದೆ.ಮೆಸೇಜ್ ನಲ್ಲಿ ಏನಿತ್ತು?
ಧನ್ಯಶ್ರೀ ವಾಟ್ಸಪ್ ನಲ್ಲಿ ಮಂಗಳೂರು ಮೂಲದ ಸಂತೋಷ್ ಎಂಬಾತನ ಜೊತೆ ಚಾಟ್ ಮಾಡಿದ್ದಾಳೆ. ಧನ್ಯಶ್ರೀ ಮೆಸೇಜ್‍ಗಳಲ್ಲಿ ಅನ್ಯಕೋಮಿನ ಪರ ಮಾತನಾಡಿದ್ದಾಳೆ. ಅಷ್ಟೇ ಅಲ್ಲದೇ ಐ ಲವ್ ಮುಸ್ಲಿಮ್ಸ್ ಎಂದು ಮೆಸೇಜ್ ಮಾಡಿದ್ದಾಳೆ. ಜೊತೆಗೆ ಇದೇ ವಿಚಾರವಾಗಿ ಆತನೊಂದಿಗೆ ಸಾಕಷ್ಟು ಚರ್ಚೆ ನಡೆಸಿದ್ದಾಳೆ. ಅವಳೊಂದಿಗೆ ಮೆಸೇಜ್‍ನಲ್ಲಿ ಮಾತನಾಡಿದ ಸ್ನೇಹಿತ ಆ ಸಂದೇಶಗಳನ್ನ ಸ್ಕ್ರೀನ್ ಶಾಟ್ ತೆಗೆದು ಮೂಡಿಗೆರೆ ಬಜರಂಗದಳದ, ಹಿಂದೂಪರ ಸಂಘಟನೆಗಳ ಗುಂಪಿಗೆ ಹಾಕಿದ್ದ. ಈ ಮೆಸೇಜ್ ನೋಡಿ ಅನಿಲ್ ಧನ್ಯಶ್ರೀ ಪೋಷಕರ ಜೊತೆ ಮಾತನಾಡಿ ಮಗಳಿಗೆ ಬುದ್ಧಿವಾದ ಹೇಳುವಂತೆ ಹೇಳಿದ್ದ.ಮೊದಲಿಗೆ ಯಾವಾಗಲು ಮೊಬೈಲ್‍ ನಲ್ಲಿ ಇರುತ್ತೀಯ, ಓದುವುದಿಲ್ಲ ಎಂದು ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಧನ್ಯಶ್ರೀ ತಂದೆ ಮೂಡಿಗೆರೆಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಘಟನೆ ಸಂಬಂಧ ಎಫ್‍ಐಆರ್ ಕೂಡ ಅದೇ ರೀತಿ ದಾಖಲಾಗಿತ್ತು. ಆದರೆ ಧನ್ಯಶ್ರೀ ಮೊಬೈಲ್‍ನಲ್ಲಿ ತನ್ನ ಸ್ನೇಹಿತನ ಜೊತೆ ತುಳುವಿನಲ್ಲಿ ಮಾಡಿರುವ ಮೆಸೇಜ್‍ಗಳು ದೊರೆತ್ತಿದ್ದು, ಈ ಸಾವು ಮೊಬೈಲ್‍ಗಾಗಿ ಆಗಿರುವಂತದ್ದಲ್ಲ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ.ಸಂಘಟನೆಯವರು ಧನ್ಯಶ್ರೀ ಮನೆಗೆ ಹೋಗಿ ನಿಮ್ಮ ಮಗಳು ಅನ್ಯಕೋಮಿನ ಹುಡುಗನ ಜೊತೆ ಓಡಾಡುತ್ತಿದ್ದಾಳೆ. ಸ್ವಲ್ಪ ಬುದ್ಧಿ ಹೇಳಿ ಎಂದಿದ್ದು, ಆಕೆಗೂ ಹೆದರಿಸಿದ್ದರು. ಈ ವಿಷಯ ತಿಳಿದ ತಂದೆ ಆಕೆಗೆ ಬೈದು ಮೊಬೈಲ್ ಕಸಿದುಕೊಂಡಿದ್ದಾರೆ. ಸಾಲದಕ್ಕೆ ಈ ವಿಷಯ ಮನೆಯ ಅಕ್ಕಪಕ್ಕದವರಿಗೆ, ಹೆತ್ತವರಿಗೆ, ಸ್ನೇಹಿತರಿಗೆ ಗೊತ್ತಾಗಿದೆ ಎಂದು ಧನ್ಯಶ್ರೀ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.ಧನ್ಯಶ್ರೀ ಜೊತೆ ಮೊಬೈಲ್ ನಲ್ಲಿ ಚಾಟ್ ಮಾಡುತ್ತಿದ್ದ ಮಂಗಳೂರಿನ ಸಂತೋಷ್ ಯಾರು ಎನ್ನುವುದು ತಿಳಿದುಬಂದಿಲ್ಲ. ಆತನ ಪತ್ತೆಗೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದನ್ನು ಓದಿ: ನೇಣು ಬಿಗಿದುಕೊಂಡು ಬಿಕಾಂ ವಿದ್ಯಾರ್ಥಿನಿ ಆತ್ಮಹತ್ಯೆ- ಸಾವಿಗೂ ಮುನ್ನ ಐ ಲವ್ ಮುಸ್ಲಿಮ್ಸ್ ಎಂದು ಮೆಸೇಜ್ ಮಾಡಿದ್ದ ಯುವತಿ Sign in to your account
Username or Email Address


Password

 Remember Me


