ಬೆಂಗಳೂರು: ಮುಂಬೈ ರೀತಿಯಲ್ಲೇ ಬೆಂಗಳೂರಿನ ಬಾರ್ ಅಂಡ್ ರೆಸ್ಟೋರೆಂಟ್‍ವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದೆ. ಬೆಂಕಿಯ ಆರ್ಭಟಕ್ಕೆ ಕೆಲಸದ ಬಳಿಕ ನಿದ್ರೆ ಜಾರಿದ್ದ ಐವರು ಕಾರ್ಮಿಕರು ಸಜೀವ ದಹನವಾಗಿದ್ದಾರೆ.ಮೃತರನ್ನು ತುಮಕೂರು ಮೂಲದ ಸ್ವಾಮಿ(23), ಪ್ರಸಾದ್(20), ಮಹೇಶ್ (35), ಹಾಸನದ ಮಂಜುನಾಥ್ ( 45), ಮಂಡ್ಯದ ಕೀರ್ತಿ(24) ಎಂದು ಗುರುತಿಸಲಾಗಿದೆ. ಇಂದು ಬೆಳಗಿನ ಜಾವ ಸುಮಾರು 2.30ಕ್ಕೆ ಬೆಂಕಿ ಅವಘಡ ಸಂಭವಿಸಿದ್ದು, ಕೈಲಾಶ್ ಬಾರ್ ಸಂಪೂರ್ಣ ಸುಟ್ಟು ಕರಕಲವಾಗಿದೆ. ಕೆಲಸದ ಬಳಿಕ ಅಲ್ಲಿಯ ನೌಕರರು ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದ್ದು, ಸಜೀವ ದಹನಗೊಂಡಿದ್ದಾರೆ. ಬಾರ್ ಕಟ್ಟಡ ಸುಮಾರು 20 ರಿಂದ 30 ವರ್ಷಗಳ ಹಳೆಯದು ಎಂದು ತಿಳಿದು ಬಂದಿದೆ. ಹಾಗಾಗಿ ಕಟ್ಟಡದಲ್ಲಿ ಯಾವುದೇ ಎಮರ್ಜಿನ್ಸಿ ಎಕ್ಸಿಟ್ ಇಲ್ಲದ ಕಾರಣ ಐವರು ಸಜೀವ ದಹನವಾಗಿದ್ದಾರೆ.ಮೊದಲಿಗೆ ಕಟ್ಟಡದ ಸಾಕಷ್ಟು ವೈರ್‍ಗಳಿರುವ ಜಂಕ್ಷನ್ ಬಾಕ್ಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ರಮೇಣ ಕಟ್ಟಡಕ್ಕೆ ಬೆಂಕಿ ಆವರಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಐದು ಶವಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡದಿಂದ ಹೊರಕ್ಕೆ ತೆಗೆದಿದ್ದಾರೆ. ಬಾರ್ ಮಾಲೀಕ ಆರ್.ವಿ.ದಯಾಶಂಕರ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


