ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ದುಷ್ಕರ್ಮಿಗಳ ಮಾರಣಾಂತಿಕ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಶೀರ್ ಮೃತಪಟ್ಟಿದ್ದಾರೆ.ಜನವರಿ 3 ರಂದು ಹಲ್ಲೆಗೊಳಗಾಗಿದ್ದ ಬಶೀರ್ ನಗರದ ಎಜೆ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 8.10 ಕ್ಕೆ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.ಸುರತ್ಕಲ್ ನ ಕಾಟಿಪಳ್ಳ ಎಂಬಲ್ಲಿ ಜನವರಿ 3ರಂದು ಮಧ್ಯಾಹ್ನ ಸುಮಾರು 1.30ಕ್ಕೆ ದುಷ್ಕರ್ಮಿಗಳ ತಂಡವೊಂದು ದೀಪಕ್ ರಾವ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿತ್ತು. ಪರಿಣಾಮ ಗಂಭೀರ ಗಾಯಗೊಂಡ ದೀಪಕ್ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಅಂದೇ ರಾತ್ರಿ ಕೊಟ್ಟಾರ ಚೌಕಿಯಲ್ಲಿ ಫಾಸ್ಟ್ ಫುಡ್ ಅಂಗಡಿಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಬಶೀರ್ ಮೇಲೆ 7 ಜನರ ತಂಡವೊಂದು ತಲ್ವಾರ್ ದಾಳಿ ನಡೆಸಿತ್ತು. ಪರಿಣಾಮ ಗಂಟಲು, ತಲೆ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದ ಬಶೀರ್ ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಬಶೀರ್ ಆರೋಗ್ಯ ವಿಚಾರಿಸಲು ಶನಿವಾರ ಸಚಿವ ಯುಟಿ ಖಾದರ್ ಭೇಟಿ ನೀಡಿ ಆಸ್ಪತ್ರೆಯ ವೆಚ್ಚ ಭರಿಸುವ ಭರವಸೆ ನಿಡಿದ್ದರು. ಅಲ್ಲದೇ ಬಶೀರ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಬಶೀರ್ ಕೊನೆಯುಸಿರೆಳೆದಿದ್ದಾರೆ.https://www.youtube.com/watch?v=prf8LAzRcushttps://www.youtube.com/watch?v=nqZ3ZShX1q0https://www.youtube.com/watch?v=82lslIp7u0whttps://www.youtube.com/watch?v=XIln_78eJlQSign in to your account
Username or Email Address


Password

 Remember Me


