ಹಾವೇರಿ: ವಿಜಯದಶಮಿ (Vijayadashami) ದಿನದಂದು ದೇವರ ಪಲ್ಲಕ್ಕಿ ಕೊಂಡೊಯ್ಯುವ ವೇಳೆ ಕೆಲವು ಕಿಡಿಗೇಡಿಗಳು ತಡೆದು ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ ಘಟನೆ ಹಾನಗಲ್‍ನಲ್ಲಿ ನಡೆದಿದೆ.ಐತಿಹಾಸಿಕ ಹಾನಗಲ್ (Hangal) ತಾರಕೇಶ್ವರ ದೇವರ (Tarakeshwara Temple) ಬನ್ನಿ ಮುಡಿಯುವ ಪಲ್ಲಕ್ಕಿ ಉತ್ಸವದ ವೇಳೆ ಈ ಘಟನೆ ನಡೆದಿದೆ. ಹಾನಗಲ್ ನಗರದ ಗ್ರಾಮದೇವಿ ಪಾದಗಟ್ಟಿ ಸರ್ಕಲ್‍ನಿಂದ ಕಾಶ್ಮೀರಿ ದರ್ಗಾ ಮಾರ್ಗವಾಗಿ ಪಲ್ಲಕ್ಕಿ ಹೊರಟಿತ್ತು. ಬಳಿಕ ವಾಪಸ್ ತಾರಕೇಶ್ವರ ದೇವಸ್ಥಾನಕ್ಕೆ ಸಾಗುವ ವೇಳೆ ಶಾಂತಯುತವಾಗಿ ಸಾಗುತ್ತಿದ್ದ ಮೆರವಣಿಗೆಯನ್ನು ತಡೆದು ಈ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಭಾರತವನ್ನು ಕಟ್ಟಲು ಯುವಜನರು ವಾರಕ್ಕೆ 70 ಗಂಟೆ ದುಡಿಯಬೇಕು: ನಾರಾಯಣ ಮೂರ್ತಿಈ ವೇಳೆ ದರ್ಗಾ ಬಳಿ ಬಂದಾಗ ಪಲ್ಲಕ್ಕಿ ತಡೆಯೋ ಅಗತ್ಯ ಏನಿತ್ತು? ಎಂದು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಪೊಲೀಸರು ಬಂದು ಪರಿಸ್ಥಿತಿ ಶಾಂತಗೊಳಿಸಿದ್ದಾರೆ.ಈ ಕುರಿತು ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಹಾನಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯ ವೀಡಿಯೋ ಈಗ ವೈರಲ್ ಆಗಿದ್ದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: PublicTV Explainer: ಉಗುರಿಗೆ ಹೆದರಿದ ‘ಹೀರೋಸ್‌’; ವನ್ಯಜೀವಿ ಸಂರಕ್ಷಣಾ ಕಾಯ್ದೆ ಏನು ಹೇಳುತ್ತೆ? – ಅಪರಾಧಕ್ಕೆ ಶಿಕ್ಷೆ ಏನು?Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


