ಬೆಂಗಳೂರು: ಕೈಗಾರಿಕೆಗಳು ವಿದ್ಯಾರ್ಥಿಗಳ ಪಠ್ಯಪುಸ್ತಕದ ಪಾಂಡಿತ್ಯಕ್ಕಿಂತ ಕೌಶಲ್ಯ ಶಿಕ್ಷಣ ಕಲಿತವರನ್ನು ಎದುರು ನೋಡುತ್ತಿರುವುದರಿಂದ ಕಾಲೇಜುಗಳು ವಿದ್ಯಾರ್ಥಿಗಳಿಗೆ `ಇಂಡಸ್ಟ್ರಿ ರೆಡಿನೆಸ್’ ನಂತಹ ಶಿಕ್ಷಣ ಪದ್ಧತಿಯನ್ನು ಕಲಿಸಬೇಕೆಂದು ಇನ್ಫೋಸಿಸ್‌ನ L & D ವಿಭಾಗದ ಜಾಗತಿಕ ಮುಖ್ಯಸ್ಥ ಶರತ್ ಚಂದ್ರ ಹೇಳಿದರು.ಬನ್ನೇರುಘಟ್ಟದಲ್ಲಿರುವ ಎಎಂಸಿ ಕಾಲೇಜು ಆಯೋಜಿಸಿದ್ದ `ಅಮೃತ ಮಹೋತ್ಸವದ ವಿಕಸಿತ್ ಭಾರತ್ @2047′ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇದು ಪ್ರಧಾನ ಮಂತ್ರಿಗಳ ಯೋಜನೆಯಾಗಿದ್ದು, ಶಿಕ್ಷಣ ಸಂಸ್ಥೆಗಳನ್ನು ಕೈಗಾರಿಕೆಗಳ ನಡುವಿನ ಸಂಪರ್ಕ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಸ್ವಾಂತಂತ್ರ‍್ಯ ಬಂದು 75 ವರ್ಷ ಕಳೆದಿದೆ. ಮುಂದಿನ 25 ವರ್ಷಕ್ಕೆ ಶತಮಾನೋತ್ಸವಕ್ಕೆ ನಾವು ಹೆಜ್ಜೆಹಿಡಲಿದ್ದು, ಸಾಕಷ್ಟು ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕಿದೆ. ವಿದ್ಯಾರ್ಥಿಗಳು ಕಲಿಕಾ ವೇದಿಕೆಗಳಾದ ಎಐ, ಎಂಎಲ್‌ಗಳನ್ನು ಬಳಕೆ ಮಾಡಿಕೊಂಡು ಉತ್ಕೃಷ್ಟವಾಗಿ ಕಲಿಯಬೇಕು ಎಂದರು. ಇದನ್ನೂ ಓದಿ: ಎಂಜಿನಿಯರಿಂಗ್, ವೆಟರಿನರಿ, ಫಾರ್ಮ್ ಸೈನ್ಸ್, ಆರ್ಕಿಟೆಕ್ಟರ್ ಕೋರ್ಸುಗಳಿಗೆ ಪ್ರವೇಶಾತಿ ಅಕ್ಟೋಬರ್ 30ಕ್ಕೆ ವಿಶೇಷ ಸುತ್ತು: KEAಎಎಂಸಿ ಶಿಕ್ಷಣ ಸಂಸ್ಥೆಯ ಕಾರ್ಯಕಾರಿ ಉಪಾಧ್ಯಕ್ಷ ರಾಹುಲ್ ಕಲ್ಲೂರಿ ಮಾತನಾಡಿ, ಭಾರತವು ಆರ್ಥಿಕವಾಗಿ ಮತ್ತಷ್ಟು ಸಧೃಡವಾಗಲು ಮುಂದಿನ 25 ವರ್ಷ ಬಹಳ ಮಹತ್ವವಾಗಿದೆ. ನಾವು ಬೆಳೆಯಬೇಕಾದಲ್ಲಿ, ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆ ಎರಡು ಜೊತೆಗೂಡಿ ಕೆಲಸ ಮಾಡಬೇಕಿದೆ ಎಂದರು.ಎಎಂಸಿ ಕಾಲೇಜು, ಕೇಂದ್ರ ಶಾಲಾ ಶಿಕ್ಷಣದ ಜೊತೆಗೆ ಆಯೋಜಿಸಿದ್ದ ಈ ವಿಕಸಿತ್ ಭಾರತ್ ಕಾರ್ಯಕ್ರಮದಲ್ಲಿ 1,500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ಭಾರತದ ಕಾನೂನು ಬದಲಿಸುವ ಮೂರು ಮಸೂದೆಗಳು ಶೀಘ್ರದಲ್ಲಿ ಅಂಗೀಕಾರ: ಅಮಿತ್ ಶಾWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


