ಮೈಸೂರು: 6ನೇ ತರಗತಿ ವಿದ್ಯಾರ್ಥಿನಿಗೆ ಮೂರು ತಿಂಗಳಿನಿಂದ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿ ಅನುಚಿತವಾಗಿ ವರ್ತಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಕೆ.ಆರ್.ನಗರದ ಶಾಲೆಯ ಶಿಕ್ಷಕನಾಗಿರುವ ರೋಹಿತ್ ಮೇಲೆ ಈ ಆರೋಪ ಕೇಳಿಬಂದಿದೆ. ಮೂಲತಃ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ನಿವಾಸಿಯಾದ ರೋಹಿತ್ ಶಾಲಾ ಅವಧಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಪೋಷಕರು ಆರೋಪಿಸಿದ್ದಾರೆಬಾಲಕಿಯ ಹಾವಭಾವದಲ್ಲಿ ಬದಲಾವಣೆ ಕಂಡು ಬಂದ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ನಂತರ ಮೈಸೂರಿನಲ್ಲಿ ಮನಶಾಸ್ತ್ರಜ್ಞರಲ್ಲಿ ಕೌನ್ಸಿಲಿಂಗ್ ಮಾಡಿಸಿದ್ದಾರೆ. ಈ ವೇಳೆ ಬಾಲಕಿ ರೋಹಿತ್ ಕೃತ್ಯದ ಬಗ್ಗೆ ಬಾಯಿ ಬಿಟ್ಟಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಪೋಷಕರು ಶಾಲೆ ಬಳಿ ತೆರಳಿ ಶಿಕ್ಷಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.ಅಪ್ರಾಪ್ತೆಯ ಪೋಷಕರು ಶಿಕ್ಷಕನನ್ನು ಎಳೆತಂದು ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಕೆ.ಆರ್. ನಗರ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಈ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


