ಕಲಬುರಗಿ: ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ಬಳಿ ಇಂದು ಮುಂಜಾನೆ ನಡೆದಿದೆ.ಕೋಡ್ಲಾ ಗ್ರಾಮದ ಸಿದ್ದಪ ಕುಂಬಾರ(17) ಮತ್ತು ಅಂಬರೀಷ್ ಗುತ್ತೇದಾರ್(24) ಮೃತ ದುರ್ದೈವಿಗಳು. ಬೈಕ್ ಸವಾರರು ಹೆಲ್ಮೆಟ್ ಧರಿಸದೇ ಇರುವ ಪರಿಣಾಮ ಅಪಘಾತ ಸಂಭವಿಸಿದಾಗ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದ್ದು, ತೀರ್ವ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಇಂದು ಮುಂಜಾನೆ ಸಿದ್ದಪ ಕುಂಬಾರ ಮತ್ತು ಅಂಬರೀಶ್ ಒಟ್ಟಿಗೆ ಕೋಡ್ಲಾಯಿಂದ ಕಲಬುರಗಿಗೆ ಹೋಗುತ್ತಿದ್ದರು. ಸಾರಿಗೆ ಬಸ್ ಕಲಬುರಗಿಯಿಂದ ಸೇಡಂ ಕಡೆಗೆ ಬರುತ್ತಿತ್ತು. ಈ ಸಂದರ್ಭದಲ್ಲಿ ಬೈಕ್ ಸವಾರರು ಹೆಲ್ಮೆಟ್ ಧರಿಸದೇ ವೇಗವಾಗಿ ಬೈಕ್ ಓಡಿಸುಕೊಂಡು ಬರುತ್ತಿದ್ದರು. ಸವಾರನ ನಿಯಂತ್ರಣ ತಪ್ಪಿ ವೇಗವಾಗಿ ಸಾರಿಗೆ ಬಸ್‍ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೂ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.






 Advertisement 




Sign in to your account
Username or Email Address


Password

 Remember Me


