ಬಾಗಲಕೋಟೆ: ಬಾದಾಮಿ ಜಾತ್ರೆಗೆ ಪಾದಯಾತ್ರೆ ತೆರಳುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಭಕ್ತರೊಬ್ಬರು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಹಲಕುರ್ಕಿ ಗ್ರಾಮದ ಬಳಿ ನಡೆದಿದೆ.ಕೆರೂರ ಪಟ್ಟಣದ ನಿವಾಸಿ ರಾಜು ಡೊಳ್ಳಿ(38) ಮೃತ ವ್ಯಕ್ತಿ. ರಾಜು ಸ್ನೇಹಿತರೊಂದಿಗೆ ಇಂದು ನಡೆಯಲಿರೋ ಬಾದಾಮಿಯ ಬನಶಂಕರಿ ಜಾತ್ರೆಗೆ ಪಾದಯಾತ್ರೆ ತೆರಳುತ್ತಿದ್ದರು. ಈ ವೇಳೆ ಬೈಕ್ ಡಿಕ್ಕಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ರಾಜು ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಕೆರೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. Sign in to your account
Username or Email Address


Password

 Remember Me


