ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, ವಿದ್ಯಾರ್ಥಿಯೋರ್ವ ಇನ್ನೋರ್ವ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಪರಾರಿಯಾಗಿರೋ ಘಟನೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.ರಾಮನಗರ ಇನ್ಸ್ ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ವಿದ್ಯಾರ್ಥಿ ಸಿದ್ದರಾಜು ಎರಡನೇ ವರ್ಷದ ವಿಘ್ನೇಶ್ ಎಂಬಾತನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ವಿಘ್ನೇಶ್ ನ ಬೆನ್ನು, ಹಣೆ, ಹೊಟ್ಟೆ ಭಾಗಕ್ಕೆ ಸಿದ್ದರಾಜು ಚಾಕುವಿನಿಂದ ಇರಿದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿರೋ ವಿಘ್ನೇಶ್ ಚಿಕಿತ್ಸೆ ಪಡೆಯುತ್ತಿದ್ದಾನೆ.ರಾಮನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Sign in to your account
Username or Email Address


Password

 Remember Me


