ತುಮಕೂರು: ಕಿಡಿಗೇಡಿಗಳು ಭತ್ತದ ಬಣವೆಗೆ ಬೆಂಕಿ ಇಟ್ಟ ಪರಿಣಾಮ ಮೂರು ಬೃಹತ್ ಬಣವೆಗಳು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಯಲಿಯೂರಿನಲ್ಲಿ ನಡೆದಿದೆ.ಗೋವಿಂದಯ್ಯ, ನಟರಾಜ ಹಾಗೂ ಚಂದ್ರಪ್ಪ ಎನ್ನುವವರಿಗೆ ಈ ಬಣವೆ ಸೇರಿದೆ. ಪ್ರತ್ಯೇಕ ಸ್ಥಳದಲ್ಲಿ ಕೃತ್ಯ ನಡೆದಿರುವುದರಿಂದ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವಷ್ಟರಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿತ್ತು.ಬಣವೆ ಸುಟ್ಟು ಭಸ್ಮವಾದ ಪರಿಣಾಮ ಮೂವರೂ ರೈತರಿಗೆ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಈ ಸಂಬಂಧ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


