ದಾವಣಗೆರೆ: ಜಿಲ್ಲೆಯ ಹರಪ್ಪನಹಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹಾವು ಹಾಗೂ ಗೂಬೆ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಆರು ಜನರನ್ನ ಬಂಧಿಸಿದ್ದಾರೆ.ಮಂಗಳೂರು ಮೂಲದ ಖಾದರ್, ಶಂಬು, ವೀರೇಂದ್ರ, ಜಗದೀಶ್ ಮತ್ತು ಹರಪ್ಪನಹಳ್ಳಿ ತಾಲೂಕಿನ ನಂದಿ ಬೇಗೂರಿನ ಅಲ್ಲಾಬಷ್ಕ್ ಹಾಗೂ ಲೋಕೇಶ್ ಬಂಧಿತ ಆರೋಪಿಗಳು. ಹಾವು ಮತ್ತು ಗೂಬೆಯನ್ನು ಮಾರಾಟ ಮಾಡಲು ಬಂದಾಗ ಖಚಿತ ಮಾಹಿತಿ ಮೇಲೆ ದಾಳಿ ಮಾಡಿದ ಪೊಲೀಸರು ಆರು ಜನ ಆರೋಪಿಗಳನ್ನ ಬಂಧಿಸಿ ಹಾವು, ಗೂಬೆ ಹಾಗೂ ಸ್ಯಾಂಟ್ರೋ ಕಾರನ್ನ ವಶಕ್ಕೆ ಪಡೆದಿದ್ದಾರೆ.ಪೊಲೀಸರು ಬಂಧಿತರಿಂದ 30 ಲಕ್ಷ ರೂ. ಮೌಲ್ಯದ ನಾಲ್ಕುವರೆ ಕೆಜಿ ತೂಕದ ಹಾವು ಹಾಗೂ 20 ಲಕ್ಷ ರೂ. ಮೌಲ್ಯದ ಒಂದು ಗೂಬೆಯನ್ನ ವಶಕ್ಕೆ ಪಡೆದಿದ್ದಾರೆ.ಈ ಬಗ್ಗೆ ಹರಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


