ಚಾಮರಾಜನಗರ: ತಾಯಿಯಿಂದ ಬೇರ್ಪಟ್ಟ ಮರಿಯಾನೆಯನ್ನು ತಾಯಿ ಆನೆ ಜೊತೆ ಸೇರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ಪಟ್ಟಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರಕ್ಕೆ ಸೇರಿದ ಓಂಕಾರ ವಲಯದ ಕಾಡಂಚಿನ ಕುರುಬರಹುಂಡಿ ಗ್ರಾಮದ ಬಳಿ ಜರುಗಿದೆ.ರಾತ್ರಿ ಸುಮಾರು 3 ಆನೆಗಳು ಗ್ರಾಮಕ್ಕೆ ಬಂದಿದ್ದು, ಗ್ರಾಮಸ್ಥರು ಆನೆಗಳನ್ನ ಓಡಿಸಿದ್ದರು. ಈ ವೇಳೆ ಮರಿಯಾನೆ ಅಲ್ಲೇ ಉಳಿದುಕೊಂಡಿತ್ತು. ಒಂದು ತಿಂಗಳ ಆನೆ ಮರಿಯನ್ನು ತಾಯಿ ಆನೆ ಬಿಟ್ಟು ಹೋಗಿದ್ದು, ಮರಿಯಾನೆ ನಿತ್ರಾಣ ಸ್ಥಿತಿಯಲ್ಲಿತ್ತು. ಇದನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.ತದನಂತರ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ನಿತ್ರಾಣ ಸ್ಥಿತಿಯಲ್ಲಿದ್ದ ಆನೆ ಮರಿಯನ್ನು ಗ್ರಾಮಸ್ಥರ ಸಹಾಯದಿಂದ ತಾಯಿ ಆನೆಯ ಜೊತೆ ಸೇರಿಸಲು ಪ್ರಯತ್ನಿಸಿದ್ದಾರೆ. ತಾಯಿ ಆನೆ ತನ್ನ ಮರಿಯನ್ನು ಹುಡುಕಿಕೊಂಡು ಬರುತ್ತದೆಂಬ ಭರವಸೆಯಿಂದ ಸದ್ಯ ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮದ ಬಳಿಯೇ ಆನೆಯನ್ನ ಇರಿಸಿಕೊಂಡಿದ್ದಾರೆ.ಈ ವೇಳೆ ಮರಿಯಾನೆಯನ್ನು ಕಂಡ ಯುವಕರು ಸೆಲ್ಫಿ ತೆಗೆದುಕೊಳ್ಳಲು ಮುಂದಾದ್ರು.Sign in to your account
Username or Email Address


Password

 Remember Me


