ಮಂಡ್ಯ: ಹೊಸ ವರ್ಷದ ಪಾರ್ಟಿ ಮಾಡುವ ವೇಳೆ ಯುವಕರ ಮಧ್ಯೆ ಘರ್ಷಣೆ ನಡೆದು ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ ಗ್ರಾಮದ ಹೊರವಲಯದ ಕೆರೆಯ ಬಳಿ ನಡೆದಿದೆ.ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಗ್ರಾಮದ 26 ವರ್ಷದ ಯುವಕ ಶಿವಕುಮಾರ್ ಮೃತ ದುರ್ದೈವಿ. ಶಶಿ ಎಂಬ ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಕುಮಾರ್ ಮತ್ತು ಶಶಿ ಹೊನಗಾನಹಳ್ಳಿ ಗ್ರಾಮದ ಹೊರವಲಯದ ಕೆರೆಯ ಬಳಿ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಕೆಲ ಯುವಕರು ಹಳೇ ದ್ವೇಷದ ಕಾರಣಕ್ಕೆ ಗಲಾಟೆ ಮಾಡಿದ್ದಾರೆ.ಈ ವೇಳೆ ಶಿವಕುಮಾರ್ ಹಾಗೂ ಶಶಿಗೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ತೀವ್ರ ರಕ್ತಸ್ರಾವಗೊಂಡ ಶಿವಕುಮಾರ ಹಾಗೂ ಶಶಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಮಾರ್ಗ ಮಧ್ಯೆ ಶಿವಕುಮಾರ್ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಶಶಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸ್ಥಳಕ್ಕೆ ಪಾಂಡವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.Sign in to your account
Username or Email Address


Password

 Remember Me


