ಚಿಕ್ಕಮಗಳೂರು: ಕೆರೆ ಏರಿಯ ಬದಿಯಲ್ಲಿದ್ದ ಕಲ್ಲುಕಂಬಕ್ಕೆ ಕಾರ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಅಂತರಗಟ್ಟೆ ಗ್ರಾಮದ ಬಳಿ ನಡೆದಿದೆ.ಶನಿವಾರ ರಾತ್ರಿ ಅಜ್ಜಂಪುರದಿಂದ ಕಡೂರಿಗೆ ಬರುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಮೂವರು ಯುವಕರಲ್ಲಿ 21 ವರ್ಷದ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರೋ ಇಬ್ಬರನ್ನ ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಮದ್ಯ ಸೇವಿಸಿದ್ದರು ಎಂದು ಹೇಳಲಾಗುತ್ತಿದೆ.ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.Sign in to your account
Username or Email Address


Password

 Remember Me


