ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಕೇಕ್ ಕತ್ತರಿಸುವ ವಿಚಾರಕ್ಕೆ ಉಂಟಾದ ಜಗಳದಲ್ಲಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶಿವರಾಮ್(25) ಕೊಲೆಯಾದ ಯುವಕ. ಕಳೆದ ರಾತ್ರಿ ಸ್ನೇಹಿತರ ಜೊತೆ ಹೊಸ ವರ್ಷ ಆಚರಣೆ ಮಾಡಿಕೊಂಡು ಕೇಕ್ ಕಟ್ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ. ಕೊಲೆ ಮಾಡಿದ ದುಷ್ಕರ್ಮಿಗಳು ತಮಿಳು ಭಾಷೆಯಲ್ಲಿ ಶುಭಾಶಯ ವಿನಮಯ ಮಾಡಿಕೊಳ್ಳುತ್ತಿದ್ದುದನ್ನು ಶಿವರಾಮ್ ಪ್ರಶ್ನಿಸಿ, ಕನ್ನಡದಲ್ಲಿ ಮಾತನಾಡುವಂತೆ ಹೇಳಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳಂದೂರು ಪೊಲೀಸರು, 7 ಜನರನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


