ಹಾಸನ: ಫಸ್ಟ್ ಪಿಯು ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಅರಸುನಗರದಲ್ಲಿ ಇಂದು ನಡೆದಿದೆ.17 ವರ್ಷದ ಅನಿತಾ ಆತ್ಮಹತ್ಯೆಗೆ ಮಾಡಿಕೊಂಡು ವಿದ್ಯಾರ್ಥಿನಿ. ಬಾಗೆ ಅರಸುನಗರದ ಸೋಮಶೇಖರ್ ಎಂಬವರ ಮಗಳು ಅನಿತಾ, ಸಕಲೇಶಪುರ ಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ ಫಸ್ಟ್ ಪಿಯು ಓದುತ್ತಿದ್ದಳು. ಇಂದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅನಿತಾ ಪೋಷಕರು ಕೃಷಿಕರಾಗಿದ್ದು, ಮನೆಗೆ ಬಂದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ಅನಿತಾ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿ ಮೃತದೇಹವನ್ನು ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆಸ್ಪತ್ರೆಯ ಆವರಣದಲ್ಲಿ ಅನಿತಾ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಈ ಸಂಬಂಧ ಸಕಲೇಶಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


