ಮಂಡ್ಯ: ಹೊಸ ವರ್ಷ ಆಚರಣೆ ವೇಳೆ ಯುವಜನತೆಗೆ ಗಾಂಜಾ ಮಾರಲು ತಯಾರಿ ನಡೆಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಮುರುಕನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ರಂಗರಾಜು ಮತ್ತು ಕೃಷ್ಣೇಗೌಡ ಬಂಧಿತ ಆರೋಪಿಗಳು. ಬಂಧಿತರಿಂದ ಎಂಟೂವರೆ ಕೆಜಿ ಗಾಂಜಾ ಸೊಪ್ಪನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಮುರುಕನಹಳ್ಳಿ ಗ್ರಾಮದ ಹೊರವಲಯದ ಗುಡಿಸಲಿನಲ್ಲಿ ಆರೋಪಿಗಳು ಅಕ್ರಮವಾಗಿ ಗಾಂಜಾ ಸೊಪ್ಪನ್ನು ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೆಆರ್ ಪೇಟೆ ಸರ್ಕಲ್ ಇನ್ಸ್‍ಪೆಕ್ಟರ್ ವೆಂಕಟೇಶಯ್ಯ ನೇತೃತ್ವದ ತಂಡ, ಇಬ್ಬರು ಆರೋಪಿಗಳನ್ನು ಬಂಧಿಸಿ ಎಂಟೂವರೆ ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.ಘಟನೆ ಸಂಬಂಧ ಕೆಆರ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


