ತುಮಕೂರು: ನಿಂತಿದ್ದ ಕ್ಯಾಂಟರ್ ಗೆ ಹಿಂದಿನಿಂದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಮತ್ತಿಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಗವಿ ಮಠದ ಬಳಿ ನಡೆದಿದೆ.ಸಿದ್ದೋಜಿರಾವ್(60) ಉಷಾಭಾಯಿ(35) ಕೀರ್ತನ(7) ಹಿತೇಶ್(3) ಹಾಗೂ 16 ವರ್ಷದ ಭುವನ ಮೃತ ದುರ್ದೈವಿಗಳು. ಇಂದು ಮುಂಜಾನೆ ಸುಮಾರು 5 ಗಂಟೆಗೆ ಈ ಭೀಕರ ಅಪಘಾತ ಸಂಭವಿಸಿದೆ. ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಮೂಲದ ಈ ಕುಟುಂಬವರು ಹೊಸ ವರ್ಷದ ನಿಮಿತ್ತ ಕೊರಟಗೆರೆಯ ಗೊರವನಹಳ್ಳಿ ದೇವಾಲಯಕ್ಕೆ ಕಾರಿನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.ಈ ಸಂದರ್ಭದಲ್ಲಿ ಕುಣಿಗಲ್ ತಾಲೂಕಿನ ಗವಿ ಮಠದ ಬಳಿ ರಸ್ತೆಯಲ್ಲಿ ಕಾರ್ ಚಲಿಸುತ್ತಿದ್ದ ವೇಳೆ ಬಾಲಕಿಯೊಬ್ಬಳು ಅಡ್ಡ ಬಂದಿದ್ದಾಳೆ. ಈ ವೇಳೆ ಬಾಲಕಿಗೆ ಡಿಕ್ಕಿ ತಪ್ಪಿಸಲು ಹೋಗಿ ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ಜನರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿತ್ತು. ತೀವ್ರವಾಗಿ ಗಾಯಗೊಂಡವರನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯವಾಗಿದ್ದರಿಂದ ಆಸ್ಪತ್ರೆಯಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.Sign in to your account
Username or Email Address


Password

 Remember Me


