ಹಾವೇರಿ: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಗಂಭೀರವಾಗಿ ಗಾಯವಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕಮದೋಡ ಗ್ರಾಮದಲ್ಲಿ ನಡೆದಿದೆ.ಮೃತರನ್ನ ಗುರುರಾಜ ರಾಯಚೂರು (76) ಮತ್ತು ರಾಮಣ್ಣ ರಾಯಚೂರು (59) ಎಂದು ಗುರುತಿಸಲಾಗಿದೆ. ಗಾಯಾಳುವನ್ನ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಮೃತರು ಹಾವೇರಿ ಜಿಲ್ಲೆ ಸವಣೂರು ಮೂಲದವರಾಗಿದ್ದು, ಸವಣೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ಬೆಳಗಿನ ಜಾವ ಈ ದುರ್ಘಟನೆ ನಡೆದಿದೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಲಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.Sign in to your account
Username or Email Address


Password

 Remember Me


